ಆ್ಯಪ್ನಗರ

ಸಹಕಾರ ಸಂಘ, ಬ್ಯಾಂಕ್‌ಗಳ ಚುನಾವಣೆ ಮುಂದೂಡಿಕೆ; ಆಡಳಿತಾಧಿಕಾರಿಗಳ ನೇಮಕ

ಪ್ರಾಥಮಿಕ, ಮಾಧ್ಯಮಿಕ ಒಕ್ಕೂಟಗಳ ಮತ್ತು ಅಪೆಕ್ಸ್‌ ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ಅವಧಿ ಮುಕ್ತಾಯಗೊಂಡಿರುವ/ ಮುಕ್ತಾಯಗೊಳ್ಳಲಿರುವ ಸಹಕಾರ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸೂಚಿಸಲಾಗಿದೆ.

Vijaya Karnataka 14 Jul 2020, 8:59 pm

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಹರಡುವಿಕೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್‌ ಅಂತ್ಯದವರೆಗೆ ಮುಂದೂಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
Vijaya Karnataka Web Election


ಈಗಾಗಲೇ ಚುನಾವಣಾ ವೇಳಾ ಪಟ್ಟಿ ಹೊರಡಿಸಿ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿದ್ದಲ್ಲಿ ಅದನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುವಂತೆ ಸಹಕಾರ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಪ್ರಾಥಮಿಕ, ಮಾಧ್ಯಮಿಕ ಒಕ್ಕೂಟಗಳ (ಫೆಡರಲ್‌ ಸಂಸ್ಥೆ) ಮತ್ತು ಅಪೆಕ್ಸ್‌ ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ಅವಧಿ ಮುಕ್ತಾಯಗೊಂಡಿರುವ/ ಮುಕ್ತಾಯಗೊಳ್ಳಲಿರುವ ಸಹಕಾರ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶದಲ್ಲಿ ಸೂಚಿಸಲಾಗಿದೆ.

ಪಂಚಾಯತ್‌ ಚುನಾವಣೆ ಆರು ತಿಂಗಳು ಮುಂದೂಡಿಕೆ, ರಾಜಕಾರಣಿಗಳಿಗೆ ನಿರಾಸೆ

ರಾಜ್ಯದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಜೂನ್‌ 16 ರಂದು ಹೊರಡಿಸಿರುವ ಆದೇಶವನ್ನು ಮುಂದುವರಿಸಲಾಗಿದೆ. ಈ ಹಿಂದೆ ಗ್ರಾಮ ಪಂಚಾಯತ್‌ ಚುನಾವಣೆಗಳನ್ನೂ ಮುಂದೂಡಲಾಗಿತ್ತು. ಇದೀಗ ಸಹಕಾರ ಸಂಘಗಳ ಚುನಾವಣೆಯನ್ನೂ ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ