ಆ್ಯಪ್ನಗರ

ಮೇಲ್ಮನೆ ಚುನಾವಣೆ: ಕಾಂಗ್ರೆಸ್‌ನಲ್ಲಿ ಮುಂದುವರಿದ ಅಭ್ಯರ್ಥಿ ಆಯ್ಕೆ ಗೊಂದಲ

ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದೆ. ಸೋಮವಾರ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸಭೆ ನಡೆದರೂ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 16 Jun 2020, 9:36 am
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರಿದಿದೆ. ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಪ್ರಮುಖರ ಸಭೆ ನಡೆದಿದ್ದು ಅಭ್ಯರ್ಥಿ ಆಯ್ಕೆ ಕುರಿತಾಗಿ ಚರ್ಚೆ ನಡೆಸಲಾಗಿದೆ.
Vijaya Karnataka Web siddaramyya


ಕಾಂಗ್ರೆಸ್ ಪಾಲಿಗೆ ದಕ್ಕುವ ಎರಡು ಸ್ಥಾನಗಳಿಗಾಗಿ ಪಕ್ಷದಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಒಂದು ಸ್ಥಾನ ಹಿಂದುಳಿದ ವರ್ಗ ಹಾಗೂ ಮತ್ತೊಂದು ಅಲ್ಪಸಂಖ್ಯಾತ ಅಭ್ಯರ್ಥಿಗೆ ನೀಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಜೆಡಿಎಸ್‌ನಲ್ಲಿ ಅವಕಾಶ 1, ಆಕಾಂಕ್ಷಿಗಳು 29; ಪರಿಷತ್‌ ಅಭ್ಯರ್ಥಿ ಆಯ್ಕೆ ಗೌಡರ ಹೆಗಲಿಗೆ

ಎಂಸಿ ವೇಣುಗೋಪಾಲ್‌, ಎಂ.ಆರ್‌ ಸೀತರಾಮ್‌, ಎಂ.ಎಚ್‌ ರೇವಣ್ಣ, ಮೋಹನ್ ಬಾಬು ಹೆಸರುಗಳು ಮೂಂಚೂಣಿಯಲ್ಲಿವೆ. ಅದರಲ್ಲೂ ಎಂ.ಸಿ ವೇಣುಗೋಪಾಲ್‌ ಪರವಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆಯುತ್ತಿದೆ.

ಈ ನಡುವೆ ಅಲ್ಪಸಂಖ್ಯಾತ ಕೋಟದಡಿಯಲ್ಲಿ ಸಾಕಷ್ಟು ಆಕಾಂಕ್ಷಿಗಳು ಮೇಲ್ಮನೆ ಮೆಟ್ಟಿಲು ಹತ್ತಲು ತುದಿಕಾಲಲ್ಲಿ ನಿಂತಿದ್ದಾರೆ. ಅಬ್ದುಲ್ ಜಬ್ಬಾರ್, ನಝೀರ್‌ ಅಹಮ್ಮದ್, ಐವನ್ ಡಿಸೋಜಾ ಟಿಕೆಟ್‌ಗಾಗಿ ಪ್ರಯತ್ನವನ್ನು ನಡೆಸುತ್ತಿದ್ದಾರೆ.

ಮೇಲ್ಮನೆ ಚುನಾವಣೆ: ಅಭ್ಯರ್ಥಿ ಆಯ್ಕೆಗಾಗಿ ಸೋಮವಾರ ಮೂರು ಪಕ್ಷಗಳ ಕೋರ್‌ ಕಮಿಟಿ ಸಭೆ

ಈ ನಡುವೆ ಒಕ್ಕಲಿಗ ಸಮುದಾಯಕ್ಕೂ ಪ್ರಾಧಾನ್ಯತೆ ನೀಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ರಾಜ್ಯಸಭೆ ಟಿಕೆಟ್‌ ಕಳೆದುಕೊಂಡ ರಾಜೀವ್‌ ಗೌಡ ಹಾಗೂ ಮುದ್ದೇಗೌಡ ಪರಿಷತ್‌ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿರುವ ನಟರಾಜ್ ಗೌಡ ಕೂಡಾ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದಾರೆ.

ಎರಡು ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಪೈಪೋಟಿ ನಡೆಯುತ್ತಿರುವುದು ಮುಖಂಡರಿಗೂ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಕೆಲವು ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ