ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಹುಟ್ಟಿರುವ ತೌಕ್ತೆ ಚಂಡಮಾರುತವು ಈ ವಾರ ರಾಜ್ಯಕ್ಕೆ ಅಪ್ಪಳಿಸಲಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಆಗಮಿಸುತ್ತಿರುವ ವರ್ಷದ ಮೊದಲ ಚಂಡಮಾರುತ ಇದಾಗಿದೆ. ಇದರ ಪರಿಣಾಮ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಮೇ.17ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಶನಿವಾರ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆಸಮುದ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿರುವುದರಿಂದ ಮೂರು ದಿನ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಒಂದು ವಾರ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.