ಆ್ಯಪ್ನಗರ

ಕೆಎಂಎಫ್‌ ಚುನಾವಣೆ :ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌.ಡಿ. ರೇವಣ್ಣ

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

Vijaya Karnataka 31 Jul 2019, 5:00 am
ಬೆಂಗಳೂರು: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web KMF.


ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಮತ್ತು ಕೂಡಲೇ ಯಾವ ಹಂತದಲ್ಲಿ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡಿತ್ತೋ,ಅಲ್ಲಿಂದಲೇ ಮತ್ತೆ ಪ್ರಕ್ರಿಯೆ ಮುಂದುವರಿಸಲು ಸಹಕಾರ ಇಲಾಖೆಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯಲ್ಲಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ರಿಜಿಸ್ಟ್ರಾರ್‌, ಚುನಾವಣಾಧಿಕಾರಿ ಸೇರಿ ಇನ್ನಿತರ ಅಧಿಕಾರಿಗಳನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಮಂಗಳವಾರ ಅರ್ಜಿ ಸಲ್ಲಿಸಲಾಗಿದ್ದು, ಅದು ಒಂದೆರಡು ದಿನಗಳಲ್ಲಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ