ಆ್ಯಪ್ನಗರ

ಕೊರೊನಾ ನಡುವೆಯೂ ಡಿಕೆಶಿ ಪದಗ್ರಹಣಕ್ಕೆ ತಯಾರಿ, ಕೆಪಿಸಿಸಿಯಲ್ಲಿ ನಡೆಯಿತು ಸಿದ್ದತಾ ಸಭೆ

ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಕೊರೊನಾದ ಸಂದರ್ಭದಲ್ಲಿ ಕಾರ್ಯಕ್ರಮದ ಅಗತ್ಯತೆ ಏನು ಎಂಬ ಪ್ರಶ್ನೆಯೂ ಉದ್ಭವವಾಗಿದೆ.

Vijaya Karnataka 23 Jun 2020, 3:37 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್‌-19 ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಲವು ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ಮುಂದಾಗಿದೆ. ಅದರಲ್ಲೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂಪೂರ್ಣ ಲಾಕ್‌ಡೌನ್ ಸಲಹೆಯನ್ನು ನೀಡಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಭರ್ಜರಿಯಾಗಿ ಸಿದ್ದತೆಗಳು ನಡೆಯುತ್ತಿವೆ.
Vijaya Karnataka Web dks programe


ಜುಲೈ 2 ರಂದು ಬೆಂಗಳೂರಿನಲ್ಲಿ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಸಿದ್ದತೆಗಳು ಜೋರಾಗಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಿದ್ಧತಾ ಸಭೆಯನ್ನು ನಡೆಯಲಾಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಈ ಸಭೆಯಲ್ಲಿ ಭಾಗಿಯಾದರು.

ಬೆಂಗಳೂರಲ್ಲಿ ಕೊರೊನಾ ಬಂದ್ರೆ ಖಲ್ಲಾಸ್..! ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲೂ ಬೆಡ್ ಇಲ್ಲ..!

ಕಾರ್ಯಕ್ರಮದ ರೂಪುರೇಷೆ ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. 2019 ರ ಲೋಕಸಭೆ ಚುನಾವಣೆ ಅಭ್ಯರ್ಥಿಗಳು, 2018 ರ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಉಸ್ತುವಾರಿಗಳಾಗಿ ನಿಯೋಜಿತರಾಗಿರುವ ಕೆಪಿಸಿಸಿ ಸಮನ್ವಯಕಾರರು ಸಭೆಯಲ್ಲಿ ಭಾಗಿಯಾದರು.

ಕೊರೊನಾ ಕಾರಣದಿಂದ ಮೂರು ಬಾರಿ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಲಾಯಿತು. ಆದರೆ ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದರು.

ಅಶಿಸ್ತೇ ಕೊರೊನಾ ಮೂಲ..! ಸೋಂಕಿತರಲ್ಲಿ ಶೇ.50ರಷ್ಟು ಜನ ಮಾಸ್ಕ್‌ ಧರಿಸುತ್ತಿರಲಿಲ್ಲ..!

ಈ ಹಿನ್ನೆಲೆಯಲ್ಲಿ ಜುಲೈ 2 ಕ್ಕೆ ಕಾರ್ಯಕ್ರಮ ನಿಗದಿಯಾಗಿದೆ. ಎಲ್ಲಾ ಜಿಲ್ಲಾ ಹಾಗೂ ಬ್ಲಾಕ್‌ ಕೇಂದ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ಆದರೆ ರಾಜ್ಯದಲ್ಲಿ ಮತ್ತೆ ಕೊರೊನಾ ಸಂಖ್ಯೆ ಮಿತಿ ಮೀರಿ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸುವುದು ಎಷ್ಟು ಸಮಂಜಸ ಎಂಬ ಚರ್ಚೆಗಳು ನಡೆಯುತ್ತಿವೆ. ಸಿದ್ದತಾ ಸಭೆಯಲ್ಲೇ ಸಾಕಷ್ಟು ಜನರು ಭಾಗಿಯಾಗಿದ್ದರು. ಯಾರೂ ಕೂಡಾ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ.

ಹೀಗಿರುವಾಗ ಸಂಕಷ್ಟದ ಅವಧಿಯಲ್ಲಿ ಪದಗ್ರಹಣ ಕಾರ್ಯಕ್ರಮದ ಅಗತ್ಯತೆ ಏನು ಎಂಬ ಪ್ರಶ್ನೆ ಕೂಡಾ ಇಲ್ಲಿ ಉದ್ಭವವಾಗುತ್ತದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಯೋಚಿಸಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ