ಆ್ಯಪ್ನಗರ

ಲಾಕ್‌ಡೌನ್ ನಡುವೆಯೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ, ಹೇಗೆ ನಡೆಯುತ್ತಿದೆ ತಯಾರಿ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಲಾಕ್‌ಡೌನ್ ನಡುವೆಯೂ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಜಿಲ್ಲಾ ಮಟ್ಟದಲ್ಲಿ ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುವಂತೆ ಮುಖಂಡರಿಗೆ ಸೂಚನೆ ನೀಡಲಾಗಿದೆ.

Vijaya Karnataka Web 19 May 2020, 4:15 pm
ಬೆಂಗಳೂರು: ಕೊರೊನಾ ವೈರಸ್‌ ಲಾಕ್‌ಡೌನ್ ನಡುವೆಯೂ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಡಿಕೆ ಶಿವಕುಮಾರ್ ಪದಗ್ರಹಕ್ಕೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಲಾಕ್‌ಡೌನ್ ಕಾರಣದಿಂದಾಗಿ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಆನ್‌ಲೈನ್‌ ಮೂಲಕವೇ ವಿಭಿನ್ನವಾಗಿ ಪ್ರಮಾಣವಚನ ಸ್ಪೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೂ ಭಾಗಿಯಾಗುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ.
Vijaya Karnataka Web dk 3


ಕಾಂಗ್ರೆಸ್ ಹಿರಿಯ ಮುಖಂಡರು ತೆಗೆದುಕೊಂಡ ತೀರ್ಮಾನದಂತೆ ಸರಳವಾಗಿ ಹಾಗೂ ವಿಶಿಷ್ಟ ರೀತಿಯಲ್ಲಿ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತಯಾರಿ ನಡೆಯುತ್ತಿದೆ. ಆದರೆ ಕಾರ್ಯಕರ್ಮದ ದಿನಾಂಕವನ್ನು ಇನ್ನೂ ನಿಗದಿಗೊಳಿಸಿಲ್ಲ.

ಆಹಾರ, ಮಾಸ್ಕ್‌ ವಿತರಿಸಿ ಸಿಕ್ಕಿಂ ಜನತೆಗೆ ಬೀಳ್ಕೊಟ್ಟ ಡಾ. ಅಶ್ವತ್ಥ ನಾರಾಯಣ

ಝೂಮ್ ಆಪ್ ಮೂಲಕ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಪರಿಹಾರದ ಹೆಸರಿನಲ್ಲಿ ಜನರ ಜೊತೆಗೆ ಚೆಲ್ಲಾಟ ಬೇಡ! ಕೇಂದ್ರದ ವಿರುದ್ಧ ಎಚ್‌ಡಿಕೆ ಗರಂ

ಜಿಲ್ಲಾ ಕಚೇರಿಗಳಲ್ಲಿ ಪ್ರಮಾಣ ವಚನ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಬೇಕು ಹಾಗೂ ಇದಕ್ಕೆ ಪೂರ್ವ ತಯಾರಿ ಮಾಡಲು ಅರ್ಹ ವೀಕ್ಷಕರನ್ನು ನೇಮಿಸಬೇಕು. ಕಾರ್ಪೊರೇಷನ್ ವಾರ್ಡ್‌ನಲ್ಲಿ 1, ನಗರದ ಸಭೆಯಲ್ಲಿ 3 ಹಾಗೂ ಪಂಚಾಯತ್‌ಗಳಲ್ಲಿ 1 ಕಡೆಗಳಲ್ಲಿ ಕಾರ್ಯಕ್ರಮ ಕಡ್ಡಾಯವಾಗಿ ಆಯೋಜಿಸಲಬೇಕು ಎಂದು ಕೆಪಿಸಿಸಿ ಸೂಚನೆ ನೀಡಿದೆ.

ಸಭೆಯನ್ನು ಸಭಾಂಗಣ ಅಥವಾ ಮುಖಂಡರ ಮನೆಯ ಆವರಣದಲ್ಲಿ ಮಾಡಬೇಕು. ಇಲಾಖೆಯಿಂದ ಇದಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು. ಲಾಕ್‌ಡೌನ್ ಆದೇಶ ಜಾರಿಯಲ್ಲಿರುವದರಿಂದ ಮಾಸ್ಕ್‌ ಬಳಸುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕುಹಾಗೂ ಪ್ರತಿ ಸಬೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ಇತರಡೆಗಳಲ್ಲಿ ಕನಿಷ್ಠ 100 ಮಂದಿ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ