ಆ್ಯಪ್ನಗರ

ನಾನು ಯಾವುದೇ ತಪ್ಪು ಮಾಡಿಲ್ಲ, ಇ.ಡಿ ವಿಚಾರಣೆಗೆ ಹಾಜರಾಗುತ್ತೇನೆ: ಡಿಕೆಶಿ

ನಾನು ಯಾವುದೇ ತಪ್ಪು ಮಾಡಿಲ್ಲ, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು ಈ ಬಗ್ಗೆ ಹೇಳಿದ್ದಿಷ್ಟು.

Vijaya Karnataka Web 17 Sep 2022, 2:50 pm

ಹೈಲೈಟ್ಸ್‌:

  • ನಾನು ಯಾವುದೇ ತಪ್ಪು ಮಾಡಿಲ್ಲ
  • ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುತ್ತೇನೆ
  • ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web dk shivakumar
ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು ಇಡಿ ನೋಟಿಸ್‌ ಕುರಿತಾದ ಪ್ರಶ್ನೆಗೆ ಈ ರೀತಿಯಾಗಿ ಉತ್ತರಿಸಿದರು.

ಇ.ಡಿ. ವಿಚಾರಣೆಗೆ ಹಾಜರಾಗುತ್ತೀರ ಎಂದು ಕೇಳಿದಾಗ, ' ಮೈಸೂರು ಪ್ರವಾಸ ಮುಗಿಸಿದ ಬಳಿಕ ದೆಹಲಿಗೆ ಹೋಗಿ ಇಡಿ ತನಿಖೆ ಎದುರಿಸುತ್ತೇನೆ. ಅವರು ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಅಲ್ಲಿಗೆ ಹೋಗಿ ವಿಚಾರ ತಿಳಿಯುತ್ತೇನೆ ಎಂದರು.

DK Shivakumar: ಭಾರತ್ ಜೋಡೋಗೆ ನಮ್ಮ ಶಾಸಕರ ಸಹಕಾರ ಇದೆ, ಆದರೆ ನನ್ನ ವೇಗ ಸ್ವಲ್ಪ ಜಾಸ್ತಿ ಇದೆ: ಡಿಕೆಶಿ

ಯಡಿಯೂರಪ್ಪ ಅವರ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದೇನೆ. ಮೊದಲ ಬಾರಿಗೆ ಇಡಿ ನೋಟಿಸ್ ಬಂದಿದೆ. ಅವರ ಬಳಿ ಎಲ್ಲಾ ಮಾಹಿತಿ ಇದೆ. ಆದರೂ ಹೊಸತಾಗಿ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದರು.

ಅಧಿವೇಶನದ ಹಿನ್ನೆಲೆಯಲ್ಲಿ ವಿನಾಯಿತಿ ಕೇಳಬಹುದಲ್ಲ ಎಂದು ಕೇಳಿದಾಗ, ' ಅಧಿವೇಶನ ಕಾರಣದಿಂದ ವಿಚಾರಣೆಯಿಂದ ವಿನಾಯಿತಿ ಕೇಳಬಹುದು, ಕೇಳಿದರೆ ನಾನು ಪಲಾಯನ ಮಾಡಿದಂತೆ ಆಗುತ್ತದೆ. ನಾನು ಪಲಾಯನ ಮಾಡುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಯಾವುದೇ ಹಗರಣ ಇಲ್ಲ. ಹೀಗಾಗಿ ನಾನು ಹೋಗುತ್ತೇನೆ ' ಎಂದು ತಿಳಿಸಿದರು.

ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ಗೆ ಜಾರಿ ನಿರ್ದೇಶನಾಲಯದ ನೋಟಿಸ್ ನೀಡಿದೆ. ಆದರೆ ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಇಡಿ ನೋಟಿಸ್ ನೀಡಿರುವುದನ್ನ ಖಂಡಿಸಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದು, ಆಗಸ್ಟ್ 3ರ ಮೇಕೆದಾಟು ಯಾತ್ರೆ, ಆಗಸ್ಟ್ 15ರಂದು ನಡೆಸಿದ ಅದರ ಫ್ರೀಡಂ ಮಾರ್ಚ್, ಶೇ 40ರಷ್ಟು ಕಮಿಷನ್, ಸರ್ಕಾರಿ ಉದ್ಯೋಗದ ನೇಮಕಾತಿ ಹಗರಣಗಳು, ಬೆಂಗಳೂರು ಪ್ರವಾಹ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮೋದಿ ಸರ್ಕಾರವನ್ನು ತಲ್ಲಣಗೊಳಿಸಿದೆ.

ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರ ಲೂಟಿ ಮಾಡುತ್ತಿದೆ. ಕರ್ನಾಟಕವನ್ನು 'ದಿನಕ್ಕೆ ಒಂದು ಹಗರಣ' ಎಂಬ ಕುಖ್ಯಾತಿ ತೆಗೆದುಕೊಂಡು ಹೋಗುತ್ತಿದ್ದಾರೆ. ಇದನ್ನೆಲ್ಲಾ ಪ್ರಶ್ನೆ ಮಾಡಿದ್ದಕ್ಕಾಗಿ ಡಿಕೆಶಿಗೆ ಇಡಿ ನೋಟಿಸ್ ನೀಡುವ ಮೂಲಕ ರಾಜಕೀಯ ದುರುದ್ದೇಶದಿಂದ ಬಿಜೆಪಿ ವರ್ತಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ