ಆ್ಯಪ್ನಗರ

ರಾಜ್ಯಸಭೆ ಚುನಾವಣೆ: ಜೆಡಿಎಸ್‌ಗೆ ಬೆಂಬಲ ಕುರಿತಾಗಿ ಹೈಕಮಾಂಡ್‌ ನಿರ್ಧಾರ ಅಂತಿಮ, ಡಿಕೆಶಿ

ರಾಜ್ಯಸಭೆಯ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಹೆಚ್ಚುವರಿ ಮತಗಳನ್ನು ನೀಡುವ ಮೂಲಕ ಬೆಂಬಲ ವ್ಯಕ್ತಪಡಿಸುವ ಕುರಿತಾಗಿ ಹೈಕಮಾಂಡ್‌ ನಿರ್ಧಾರ ಅಂತಿಮ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 7 Jun 2020, 12:36 pm
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಹೆಚ್ಚುವರಿ ಮತವನ್ನು ನೀಡುವ ವಿಚಾರದಲ್ಲಿ ಹೈಕಮಾಂಡ್‌ ನಿರ್ಧಾರ ಅಂತಿಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web dk shivakumar kpcc


ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮದು ಜಾತ್ಯತೀತ ಪಕ್ಷವಾಗಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಅಸಾಧ್ಯ. ಜೆಡಿಎಸ್‌ಗೆ ಬೆಂಬಲ ಕುರಿತಾಗಿ ಕೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದರು.

ರಾಜ್ಯಸಭೆ ಚುವಾಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಘೋಷಣೆಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಹೆಚ್ಚುವರಿ ಮತಗಳನ್ನು ಜೆಡಿಎಸ್‌ ಅಭ್ಯರ್ಥಿಗೆ ನೀಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಆದರೆ ಈ ಕುರಿತಾಗಿ ಅಂತಿಮ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿಲ್ಲ.

ಕೊರೊನಾ ಸಂಕಷ್ಟ: ಸೋಂಕಿನಿಂದ ರಕ್ಷಣೆಗೆ ಪೊಲೀಸರು ಪಾಲಿಸಬೇಕಾದ ಮಾರ್ಗಸೂಚಿ ಹೀಗಿವೆ

ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ಅಭಿಮಾನಿಗಳು ಬರಬೇಡಿ ಎಂದು ಡಿಕೆಶಿ ಮನವಿ

ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಾರದಂತೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರೈತರ ಮೇಲೆ ಗುಂಡಿಕ್ಕಲು ಬಿಎಸ್‌ವೈ ಸರ್ಕಾರ ತುದಿಗಾಲ ಮೇಲೆ ನಿಂತಂತೆ ಕಾಣುತ್ತಿದೆ! ಎಚ್‌ಡಿಕೆ ಆಕ್ರೋಶ

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದರೆ ಸಮಸ್ಯೆ ಉಂಟಾಗಲಿದೆ. ಈ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಕೇವಲ ಶಾಸಕರಿಗೆ ಮಾತ್ರ ಅವಕಾಶವಿದೆ. ಇವರ ಹೊರತಾಗಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಬಾರದಂತೆ ಮನವಿ ಮಾಡಿದ್ದಾರೆ.

ಬದಲಾಗಿ ಜೂನ್ 16 ರಂದು ಚುನಾವಣೆ ನಡೆದು ಫಲಿತಾಂಶ ಬಂದ ಬಳಿಕ ಖರ್ಗೆ ಅವರ ನಿವಾಸಕ್ಕೆ ತೆರಳಿ ಶುಭಕೋರುವಂತೆ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ