ಆ್ಯಪ್ನಗರ

ರೈತರ ಅನುಕೂಲಕ್ಕಾಗಿ 'ಕೃಷಿ ಸಂಜೀವಿನಿ' ಬಿಎಸ್‌ವೈಯಿಂದ ಲೋಕಾರ್ಪಣೆ

ರೈತರ ಅನುಕೂಲದ ನಿಟ್ಟಿನಲ್ಲಿ ಕೃಷಿ ಸಂಜೀವಿನಿ ವಾಹನಗಳನ್ನು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗುರುವಾರ ಲೋಕಾರ್ಪಣೆ ಮಾಡಿದರು. ಏನಿದು ಕೃಷಿ ಸಂಜೀವಿನಿ, ಇದರಿಂದ ರೈತರಿಗೆ ಏನು ಅನುಕೂಲ ಎಂಬ ವಿವರ ಇಲ್ಲಿದೆ.

Vijaya Karnataka Web 7 Jan 2021, 10:58 am
ಬೆಂಗಳೂರು: ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ಜಿಲ್ಲೆಗಳಿಗೆ ಒಂದು, ದೊಡ್ಡ ಜಿಲ್ಲೆಗಳಿಗೆ ಎರಡರಂತೆ ರಾಜ್ಯಾದ್ಯಂತ ಒಟ್ಟು 40 “ಕೃಷಿ ಸಂಜೀವಿನಿ” ವಾಹನಗಳನ್ನು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗುರುವಾರ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ದ್ವಾರದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಂದ ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆಗೊಂಡವು.
Vijaya Karnataka Web bsy


ಏನಿದು ಕೃಷಿ ಸಂಜೀವಿನಿ?

ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ , ಅತಿವೃಷ್ಟಿ , ಚಂಡಮಾರುತ ,ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ .

ಬಿಎಸ್‌ವೈ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಮುನ್ನಡೆಯಲಿದೆ: ಬಿಸಿ ಪಾಟೀಲ್ ಭರವಸೆ!

ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತೆ , ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ , ರೋಗ - ಕೀಟಗಳ ಹತೋಟಿ , ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ , ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ .

ಕೀಟ , ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಹಾಗು ಸಮರ್ಪಕ ನಿರ್ವಹಣೆ ಕುರಿತಂತ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಕೃಷಿ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಕ್ರಿಯಾ ಯೋಜನೆಯಡಿ ಲಭ್ಯವಿರುವ ಅನುದಾನದಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಆರಂಭಗೊಂಡಿವೆ.

ಕೃಷಿ ಸಂಜೀವಿನಿಯ ಉದ್ದೇಶವೇನು?

ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ ಕೀಟ / ರೋಗ / ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ಥಿತ್ವದಲ್ಲಿದ್ದು , ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ ಎಂಬುವುದು ಕೃಷಿ ಇಲಾಖೆಯ ಅಭಿಪ್ರಾಯವಾಗಿದೆ.

ಹೇಗೆ ಕಾರ್ಯನಿರ್ವಹಣೆ?

155313 ಇದು ಕೃಷಿ ಸಂಜೀವಿನಿ ಸಹಾಯವಾಣಿ. ಕೃಷಿ ಸಂಜೀವಿನಿ ಟೋಲ್ ಫ್ರೀ ಸಹಾಯವಾಣಿಯಾಗಿದ್ದು, ಈ ಸಂಖ್ಯೆಗೆ ಯಾವುದಾದರೂ ಜಿಲ್ಲೆಯಿಂದ ಕರೆ ಮಾಡಿದಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ಕರೆ ಮಾಡಿದ ರೈತರಿರುವ ಜಿ್ಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗುತ್ತದೆ. ಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದ್ದು, 155313 ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ನಂತೆ ಸಹಾಯವಾಣಿಯಾಗಿ ಕೆಲಸ ಮಾಡುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ