ಆ್ಯಪ್ನಗರ

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ಏರಿಕೆಗೆ ಮುಖ್ಯಮಂತ್ರಿ ರೆಡ್‌ ಸಿಗ್ನಲ್‌

ಶೇಕಡ 18ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಸಿಎಂ ಅದಕ್ಕೆ ತಡೆ ಒಡ್ಡಿದ್ದಾರೆ

Vijaya Karnataka Web 17 Sep 2018, 9:49 pm
ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ಆನುಮೋದನೆ ನೀಡಲಾದ ಬೆನ್ನಲ್ಲೇ ಈ ಆದೇಶ ತಡೆ ಹಿಡಿಯಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
Vijaya Karnataka Web ಕೆಎಸ್‌ಆರ್‌ಟಿಸಿ ಬಸ್‌
ಕೆಎಸ್‌ಆರ್‌ಟಿಸಿ ಬಸ್‌


ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಿಸಲು ಅನುಮೋದನೆ ನೀಡಲಾಗಿತ್ತು. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.

ಹಲವು ದಿನಗಳಿಂದ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವವನ್ನು ಮಂಡಿಸಲಾಗಿತ್ತು. ಆದರೆ ಸರಕಾರ ಇದನ್ನು ತಡೆ ಹಿಡಿದಿತ್ತು.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಿ ಸೋಮವಾರ ಪ್ರತಿ ಲೀಟರ್‌ಗೆ 2.50 ರೂಪಾಯಿಯಷ್ಟು ಇಳಿಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ಇದರ ಬೆನ್ನಲ್ಲೇ ನಾಲ್ಕು ರಿಗೆ ನಿಗಮಗಳು ಬಸ್‌ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ