ಆ್ಯಪ್ನಗರ

ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭ

ಮುಖ್ಯಮಂತ್ರಿ ಲಾಕ್‌ಡೌನ್‌ ತೆರವುಗೊಳಿಸುವ ವಿಚಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಕೆಎಸ್‌ಆರ್‌ಟಿಸಿ ಕೂಡ ಕಾರ್ಯಾರಂಭ ಮಾಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಕೆಎಸ್‌ಆರ್‌ಟಿಸಿ ನಿರ್ದೇಶಕರು ಸ್ಪಷ್ಟಪಡಿಸಿದ್ದು, ಸರ್ಕಾರದ ಆದೇಶದಂತೆ ಬೆಂಗಳೂರಿನಲ್ಲಿ ನಾಳೆಯಿಂದ ಲಾಕ್‌ಡೌನ್‌ ತೆರವು ಹಿನ್ನೆಲೆಯಲ್ಲಿ, ನಾಳೆ ಬೆಳಗ್ಗೆ ಆರು ಗಂಟೆಯಿಂದ ಬೆಂಗಳೂರಿನಿಂದ ಇತರೇ ಸ್ಥಳಗಳಿಗೆ ಬಸ್‌ ಸಂಚಾರ ಎಂದಿನಂತೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

Vijaya Karnataka Web 21 Jul 2020, 8:29 pm
ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ರೋಗ ಹರಡಲು ಶುರುವಾದ ಬಳಿಕ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ನಂತರ ದೇಶದ ಎಲ್ಲಾ ವಹಿವಾಟುಗಳು ಕೂಡ ಸ್ಥಗಿತಗೊಂಡಿತ್ತು. ಮಾರ್ಚ್‌ನಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್‌ ತೆರವುಗೊಳಿಸಿದ ನಂತರ ರಾಜ್ಯದಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳು ಕಾರ್ಯಾಚರಿಸಲು ಆರಂಭವಾಗಿತ್ತು. ಇದರಲ್ಲಿ ಮುಖ್ಯವಾಗಿ ರಾಜ್ಯದ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದು ಕೊಡುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೂಡ.
Vijaya Karnataka Web KSRTC

ರಾಜ್ಯದಲ್ಲಿ ತಗ್ಗದ ಕೊರೊನಾ ಆರ್ಭಟ..! ಮತ್ತೆ 3000+ ಕೇಸ್‌, ಗುಣಮುಖರಾದವರ ಸಂಖ್ಯೆಯಲ್ಲಿ ಭಾರೀ ಏರಿಕೆ

ಆದರೆ ಕಳೆದ ವಾರ ಎರಡನೇ ಹಂತದ ಲಾಕ್‌ಡೌನ್ ಘೋಷಣೆ ಮಾಡಿದ ಬಳಿಕ ಮತ್ತೆ ಎಲ್ಲಾ ಚಟುವಟಿಕೆಗಳು ನಿಂತು ಹೋಗಿತ್ತು. ಇದೀಗ ಮಂಗಳವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಇನ್ನು ಮುಂದೆ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್‌ಡೌನ್ ಇರಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದು, ಹೀಗಾಗಿ ನಾಳೆಯಿಂದ ಮತ್ತೆ ಎಂದಿನಂತೆ ಕಾರ್ಯಚಟುವಟಿಕೆಗಳು ಆರಂಭಗೊಳ್ಳಲಿದೆ.

ಆಶಾ ಕಾರ್ಯಕರ್ತೆಯರಿಗೆ ಸೌಲಭ್ಯ ಒದಗಿಸಲು 3 ದಿನಗಳ ಗಡುವು ನೀಡಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಲಾಕ್‌ಡೌನ್‌ ತೆರವುಗೊಳಿಸುವ ವಿಚಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಕೆಎಸ್‌ಆರ್‌ಟಿಸಿ ಕೂಡ ಕಾರ್ಯಾರಂಭ ಮಾಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಕೆಎಸ್‌ಆರ್‌ಟಿಸಿ ನಿರ್ದೇಶಕರು ಸ್ಪಷ್ಟಪಡಿಸಿದ್ದು, ಸರ್ಕಾರದ ಆದೇಶದಂತೆ ಬೆಂಗಳೂರಿನಲ್ಲಿ ನಾಳೆಯಿಂದ ಲಾಕ್‌ಡೌನ್‌ ತೆರವು ಹಿನ್ನೆಲೆಯಲ್ಲಿ, ನಾಳೆ ಬೆಳಗ್ಗೆ ಆರು ಗಂಟೆಯಿಂದ ಬೆಂಗಳೂರಿನಿಂದ ಇತರೇ ಸ್ಥಳಗಳಿಗೆ ಬಸ್‌ ಸಂಚಾರ ಎಂದಿನಂತೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಆತಂಕ:ಇನ್ಮುಂದೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ, ಬಿಎಸ್‌ವೈ ಸ್ಪಷ್ಟನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ