ಆ್ಯಪ್ನಗರ

ಯಡಿಯೂರಪ್ಪ ಎಲ್ಲಿದ್ದೀಯಪ್ಪ? ಎಂದು ಕೇಳುವಂತಾಗಿದೆ: ಕುಮಾರಸ್ವಾಮಿ

ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಲವಾರು ಗ್ರಾಮಗಳು ಸಂಪರ್ಕ ಇಲ್ಲದೇ ಪರದಾಡುವಂತಾಗಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಏಕಾಂಗಿಯಾಗಿದ್ದಾರೆ. ಸಚಿವ ಸಂಪುಟವೇ ಇಲ್ಲ ಎಂದು ಪ್ರತಿಪಕ್ಷಗಳು ಟೀಕಿಸಿವೆ.

Vijaya Karnataka Web 7 Aug 2019, 8:47 pm
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಟ್ರೋಲ್‌ ಆಗಿದ್ದ ನಿಖಿಲ್ ಎಲ್ಲಿದ್ದೀಯಪ್ಪ ಈಗ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ತಿರುಗಿದೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಅರ್ಧ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಚಿವ ಸಂಪುಟ ರಚನೆ ಮಾಡದೆ, ಹೊಸದಿಲ್ಲಿಯ ದಂಡಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳು ಟೀಕಿಸಿವೆ.

ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಒಂದು ಹೆಜ್ಜೆ ಮುಂದೆ ಹೋಗಿ, ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂದು ಕೇಳುವಂತಾಗಿದೆ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ನಿಖಿಲ್‌ ಎಲ್ಲಿದ್ದೀಯಪ್ಪ ಎನ್ನುತ್ತಿದ್ದರು. ಈಗ ಅದೇ ಜನರು ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂದು ಕೇಳಲಿ ಎಂದು ಕುಮಾರಸ್ವಾಮಿ ಕುಟುಕಿದರು.

ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿವೆ.

ರಾಜ್ಯದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮುಖ್ಯಮಂತ್ರಿಯಾಗಲೀ ಅಥವಾ ಸಚಿವರಾಗಲೀ ಜನರ ಸಂಕಷ್ಟವನ್ನು ಆಲಿಸುತ್ತಿಲ್ಲ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.

ಮತ್ತೊಂದೆಡೆ ಸರಕಾರ ನಾಪತ್ತೆಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ