ಆ್ಯಪ್ನಗರ

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಎಚ್.ಡಿ ಕುಮಾರಸ್ವಾಮಿ

ನಾಲ್ಕೂವರೆ ಗಂಟೆ ತಡವಾಗಿ ಬಂದ ಮುಖ್ಯಮಂತ್ರಿ

Vijaya Karnataka Web 24 May 2018, 1:53 pm
ತುಮಕೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿದ್ದಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿದರು.

ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆಯಲು ಆಗಮಿಸಿದ ಕುಮಾರಸ್ವಾಮಿ, ಶ್ರೀಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಮಠಗಳಿಗೆ ಭೇಟಿ ನೀಡುತ್ತಿರುವ ಸಿಎಂ, ರಾಜ್ಯ ಸರಕಾರದ ಉತ್ತಮ ಕಾರ್ಯ ನಿರ್ವಹಣೆಗೆ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಂತರ ಮಠದಲ್ಲಿಯೇ ಮುದ್ದೆ ಊಟ ಸವಿದರು.

ನಾಲ್ಕೂವರೆ ಗಂಟೆ ತಡವಾಗಿ ಎಚ್.ಡಿ.ಕೆ.‌ ಆಗಮಿಸಿದರು. ಬೆಳಗ್ಗೆ 8:30 ಕ್ಕೆ ಆಗಮಿಸುವ ಬಗ್ಗೆ ಮಾಹಿತಿ ಇತ್ತು, ಆದರೆ ಮಧ್ಯಾಹ್ನ 1 ಗಂಟೆಗೆ ಕುಮಾರಸ್ವಾಮಿ ಆಗಮಿಸಿದರು.

ಬೆಳಗ್ಗೆ 7.30 ರಿಂದಲೇ ಮಾಧ್ಯಮದವರು ಪೊಲೀಸರು ಮಠದಲ್ಲಿ ಬೀಡು ಬಿಟ್ಟಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ