ಆ್ಯಪ್ನಗರ

ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ರಸ್ತೆಯ ತುರ್ತು ರಿಪೇರಿಗೆ ಸಚಿವ ಸಿಸಿ ಪಾಟೀಲ್‌ ತಾಕೀತು

ಪ್ರಸ್ತುತ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಇದರಿಂದ ಯಾವುದೇ ತೊಂದರೆ ಇರುವುದಿಲ್ಲ. ಆದ್ದರಿಂದ ದಯವಿಟ್ಟು ಆ ಭಾಗಕ್ಕೆ ತೆರಳುವ ಪ್ರವಾಸಿಗರು ಇದನ್ನು ಗಮನಿಸಿ ಸೂಕ್ತ ಸಹಕಾರ ನೀಡಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

Vijaya Karnataka Web 21 Oct 2021, 10:07 pm
ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಾನು ಸೂಚಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲರು ತಿಳಿಸಿದ್ದಾರೆ.
Vijaya Karnataka Web ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ
ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ


ಮೈಸೂರಿನ ಈ ಘಟನೆಯ ಬಗ್ಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಸುರಿಯುತ್ತಿರುವ ಭಾರೀ ಪ್ರಮಾಣದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಈ ಭೂಕುಸಿತ ಸಂಭವಿಸಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಮೈಸೂರಿನಲ್ಲಿ ಭಾರೀ ಮಳೆ: ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂ ಕುಸಿತ

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಲೀ ಅಥವಾ ಹೆಚ್ಚಿನ ಆಸ್ತಿಪಾಸ್ತಿಯಾಗಲೀ ಹಾನಿಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಆದರೆ ಅಲ್ಲಿ ಮುಂದೆ ಹೆಚ್ಚಿನ ಅವಘಡಗಳಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅಲ್ಲಿಯ ಬೃಹತ್ ನಂದಿ ಪ್ರತಿಮೆಗೆ ತೆರಳುವ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಹಾಮಳೆಗೆ ಬೆಚ್ಚಿದ ಸಾಂಸ್ಕೃತಿಕ ನಗರಿ: ಚಾಮುಂಡಿ ಬೆಟ್ಟಕ್ಕೆ ಹೋಗುವ ಮಾರ್ಗ ಕುಸಿತ

ಪ್ರಸ್ತುತ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಇದರಿಂದ ಯಾವುದೇ ತೊಂದರೆ ಇರುವುದಿಲ್ಲ. ಆದ್ದರಿಂದ ದಯವಿಟ್ಟು ಆ ಭಾಗಕ್ಕೆ ತೆರಳುವ ಪ್ರವಾಸಿಗರು ಇದನ್ನು ಗಮನಿಸಿ ಸೂಕ್ತ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೈಸೂರಿನ ಜಿಲ್ಲಾ ಆಡಳಿತದ ಸೂಕ್ತ ಸಹಕಾರವನ್ನು ಪಡೆದುಕೊಂಡು ಆದ್ಯತೆಯ ಮೇರೆಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿಸಿ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ