ಆ್ಯಪ್ನಗರ

ನೂತನ ಸಂಚಾರ ನಿಯಮದಿಂದ ಜನಸಾಮಾನ್ಯರಿಗೆ ಕಿರುಕುಳ - ಸಿದ್ದರಾಮಯ್ಯ

ಕಟ್ಟುನಿಟ್ಟಿನ ಸಂಚಾರ ನಿಯಮಗಳನ್ನು ಹೊಂದಿರುವ ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆಯಿಂದ ಜನಸಾಮಾನ್ಯರಿಗೆ ಕಿರುಕುಳ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Vijaya Karnataka Web 8 Sep 2019, 5:25 pm
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸುವ ಕಟ್ಟುನಿಟ್ಟಿನ ಸಾರಿಗೆ ಸಂಚಾರ ನಿಯಮಗಳನ್ನು ಹೊಂದಿರುವ ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಕಾಯಿದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Vijaya Karnataka Web trafic fines


ಟ್ವಿಟರ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಈ ಕಾಯಿದೆಯನ್ನು ಜನಸಾಮಾನ್ಯರಿಗೆ ಕಿರುಕುಳ ಕೊಡುವ ಅಸ್ತ್ರವನ್ನಾಗಿ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಸ್ತೆ ಸಂಚಾರ ನಿಯಮಾವಳಿಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಆದರೆ, ನಿಯಮ ಉಲ್ಲಂಘನೆಗೆ ಭಾರೀ ಮೊತ್ತದ ದಂಡ ವಿಧಿಸುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದಿದ್ದಾರೆ.


ನೂತನ ನಿಯಮ ಜಾರಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲಿ ರಾಜ್ಯಾಂದ್ಯಂತ ವಾಹನ ಸವಾರರಿಗೆ ಬಿಸಿ ಮುಟ್ಟತೊಡಗಿದೆ. ಕುಡಿದು ವಾಹನ ಚಲಾಯಿಸಿದ ಸವಾರರಿಗೆ ಮೂರು ಪ್ರಕರಣಗಳಲ್ಲಿ ಪೊಲೀಸರು 10,000 ದಂಡ ವಿಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದ ವಿಜಯ ದೇವಪ್ಪ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಬೈಕ್ ಚಾಲನೆ ಮಾಡಿದಕ್ಕಾಗಿ 10,000 ದಂಡವನ್ನು ವಿಧಿಸಲಾಗಿದ್ದು, ಬೆಂಗಳೂರಿನಲ್ಲೂ ಬೈಕ್ ಸವಾರನೊಬ್ಬರಿಗೆ 17,000 ದಂಡವನ್ನು ಪೊಲೀಸರು ವಿಧಿಸಿದ್ದಾರೆ.

ನಿತಿನ್ ಗಡ್ಕರಿ, ರಾಹುಲ್ ಗಾಂಧಿ ಕಾಲೆಳೆದ ನೆಟ್ಟಿಗರು - ಇದು ನೂತನ ಮೋಟಾರು ಕಾಯಿದೆ ಜಾರಿಯ ಎಫೆಕ್ಟ್ !

ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆ ಜಾರಿಯಿಂದಾಗಿ ಭಾರೀ ಪ್ರಮಾಣದ ದಂಡ ಪಾವತಿಸಬೇಕಾಗಿ ಬಂದ ಹಲವಾರು ಪ್ರಕರಣಗಳು ದೇಶದಾದ್ಯಂತ ವರದಿಯಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಕಾಯಿದೆಯ ಪರ ಹಾಗೂ ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕಾಯಿದೆ ಪ್ರಕಾರ ಕನಿಷ್ಠ ದಂಡದ ಮೊತ್ತವು 100 ರೂಪಾಯಿಂದ 1000 ರೂಪಾಯಿ ಏರಿಕೆಯಾಗಿದ್ದು ಲೈಸನ್ಸ್ ಇಲ್ಲದೆ ವಾಹನ ಚಲಾಯಿಸಿದರೆ 500ರ ಬದಲಾಗಿ 5000 ದಂಡ, ವೇಗದ ಚಾಲನೆಗೆ 400 ಬದಲಾಗಿ 1000 ದಂಡ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ 100ರ ಬದಲಾಗಿ 1000 ದಂಡ ಹಾಗೂ ಮೂರು ತಿಂಗಳ ಲೈಸೆನ್ಸ್ ರದ್ದು ಮಾಡುವ ಅವಕಾಶವಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ