ಆ್ಯಪ್ನಗರ

ಬೆಂಗಳೂರಿಗೆ ಲಿಂಗನಮಕ್ಕಿ ನೀರು: ಡಿಪಿಆರ್ ತಯಾರಿಗೆ ಡಿಸಿಎಂ ಪರಮೇಶ್ವರ್ ಸೂಚನೆ

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಪ್ರಸ್ತುತ ಕಾವೇರಿಯಿಂದ 1400 ಎಂಎಲ್‌ಡಿ ನೀರನ್ನು ನಗರಕ್ಕೆ ಹರಿಸಲಾಗುತ್ತಿದೆ. ಆದಾಗ್ಯೂ ನಗರದಲ್ಲಿ ನೀರಿನ ಸಮಸ್ಯೆ ಇದೆ. ಕೆಲವೆಡೆ ಕಾವೇರಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾವೇರಿ ಐದನೇ ಹಂತದ ಯೋಜನೆಯಿಂದ ಹೆಚ್ಚೆಂದರೆ 800 ಎಂಎಲ್‌ಡಿ ನೀರು ತರಬಹುದು.‌ ಆದರೂ ನೀರಿನ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಸ್ತುತ ಕಾವೇರಿ ಮೊದಲ ಹಾಗೂ ಎರಡನೇ ಹಂತದಿಂದಲೂ ನೀರಿನ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ ಇತರೆ ಮೂಲದಿಂದ‌ ನೀರು ತರುವ ಅನಿವಾರ್ಯತೆ ಇದೆ ಎಂದರು.

Vijaya Karnataka Web 20 Jun 2019, 2:37 pm
ಬೆಂಗಳೂರು: ಬೆಂಗಳೂರು ನಗರಕ್ಕೆ ಲಿಂಗನಮಕ್ಕಿ ಜಲಾಶಯದಿಂದ ನೀರು ತರುವ ಬೃಹತ್‌ ಯೋಜನೆಗೆ ಡಿಪಿಆರ್‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
Vijaya Karnataka Web Linganamakki dam


ಬೆಂಗಳೂರು ನಗರದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ತರುವ ಯೋಜನೆ ರೂಪುರೇಷೆಗಳ ಕುರಿತು ಇಂದು ಬಿಎಂಆರ್‌ಡಿಎ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಪ್ರಸ್ತುತ ಕಾವೇರಿಯಿಂದ 1400 ಎಂಎಲ್‌ಡಿ ನೀರನ್ನು ನಗರಕ್ಕೆ ಹರಿಸಲಾಗುತ್ತಿದೆ. ಆದಾಗ್ಯೂ ನಗರದಲ್ಲಿ ನೀರಿನ ಸಮಸ್ಯೆ ಇದೆ. ಕೆಲವೆಡೆ ಕಾವೇರಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾವೇರಿ ಐದನೇ ಹಂತದ ಯೋಜನೆಯಿಂದ ಹೆಚ್ಚೆಂದರೆ 800 ಎಂಎಲ್‌ಡಿ ನೀರು ತರಬಹುದು.‌ ಆದರೂ ನೀರಿನ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಸ್ತುತ ಕಾವೇರಿ ಮೊದಲ ಹಾಗೂ ಎರಡನೇ ಹಂತದಿಂದಲೂ ನೀರಿನ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ ಇತರೆ ಮೂಲದಿಂದ‌ ನೀರು ತರುವ ಅನಿವಾರ್ಯತೆ ಇದೆ ಎಂದರು.

ಈ ಹಿಂದೆ ತ್ಯಾಗರಾಜ್‌ ಸಮಿತಿಯು ಲಿಂಗನಮಕ್ಕಿಯಿಂದಲೂ ನೀರು ಹರಿಸಬಹುದು ಎಂದು ವರದಿ ನೀಡಿದ್ದರು. ಈ ವರದಿಯನ್ನು ಅಧ್ಯಯನ ನಡೆಸಿ ನೀರು ತರುವ ಸಾಧ್ಯತೆಯನ್ನು ಕಂಡುಕೊಳ್ಳಲಾಗಿದೆ. ಹೀಗಾಗಿ ಡಿಪಿಆರ್ ಮಾಡಲು ಸೂಚಿಸಲಾಗಿದೆ. ಡಿಪಿಆರ್‌ ಬಳಿಕ ಯೋಜನೆಯ ಸಾಧಕ ಬಾಧಕವನ್ನು ಪರಿಶೀಲಿಸಲಾಗುವುದು. ಪರಿಸರ, ನೀರು ಪಂಪ್‌ ಮಾಡಲು ಇರುವ ಸವಾಲುಗಳ ಬಗ್ಗೆ ಅವಲೋಕಿಸಲಾಗುವುದು ಎಂದರು.

ಲಿಂಗನಮಕ್ಕಿಯು ಬೆಂಗಳೂರಿಗೆ 300 ಕಿ.ಮೀ. ದೂರವಿದೆ. 12 ಸಾವಿರ ಕೋಟಿ ರು.‌ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ.‌ಆದರೆ ವೆಚ್ಚದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮೊದಲ ಹಂತದಲ್ಲಿ 10 ಟಿಎಂಸಿ ನೀರನ್ನು ತರಲು ಯೋಜಿಸಲಾಗಿದೆ ಎಂದು‌ಮಾಹಿತಿ ನೀಡಿದರು.

ಲಿಂಗನಮಕ್ಕಿ ಕೇವಲ ವಿದ್ಯುತ್‌ ಉತ್ಪಾದನೆಗಷ್ಟೇ ಬಳಕೆಯಾಗುತ್ತಿದೆ. ಬಳಿಕ ಈ ನೀರು ಸಮುದ್ರದ ಪಾಲಾಗುತ್ತಿದೆ. ಈ ಜಲಾಶಯದಿಂದ ಯಾವುದೇ ನೀರಾವರಿ ಯೋಜನೆ ಕೈಗೊಂಡಿಲ್ಲ. ಹೀಗಾಗಿ‌ ಈ ಮೂಲದಿಂದ ನೀರು ತರುವುದರಿಂದ ಯಾವುದೇ ರೈತರಿಗೂ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಎತ್ತಿನಹೊಳೆ ಯೋಜನೆ ಮೂಲಕ 2.5 ಟಿಎಂಸಿ ನೀರು ತರಲಾಗುತ್ತದೆ. ಇಷ್ಟು ಬೆಂಗಳೂರಿಗೆ ಸಾಲದು. ಹೀಗಾಗಿ ಲಿಂಗನಮಕ್ಕಿಯಿಂದಲೂ ನೀರು ತರಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ