ಆ್ಯಪ್ನಗರ

ದಿಲ್ಲಿ ತಲುಪಿದ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಪ್ರಸ್ತಾವ

ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಪ್ರಸ್ತಾವ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಬಂದಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಭಾಸ್‌ ನಖ್ವಿ ...

Vijaya Karnataka 29 Mar 2018, 5:00 am
ಹೊಸದಿಲ್ಲಿ: ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಪ್ರಸ್ತಾವ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಬಂದಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಭಾಸ್‌ ನಖ್ವಿ ತಿಳಿಸಿದ್ದಾರೆ.
Vijaya Karnataka Web bakvi


ಬುಧವಾರ ಲೋಕಸಭೆಗೆ ಈ ಕುರಿತು ಮಾಹಿತಿ ನೀಡಿದ ನಖ್ವಿ, ''ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಪ್ರಸ್ತಾವ ಸೋಮವಾರವಷ್ಟೇ ಕೇಂದ್ರಕ್ಕೆ ತಲುಪಿದೆ. ಆದರೆ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮವೆಂದು ಘೋಷಿಸುವ ಕುರಿತು ಯಾವುದೇ ಪ್ರಸ್ತಾವ ಬಂದಿಲ್ಲ ,''ಎಂದು ಸ್ಪಷ್ಟಪಡಿಸಿದರು.

''ಈ ಹಿಂದೆಯೂ ಇದೇರೀತಿ ಪ್ರಸ್ತಾಪ ಬಂದಿದ್ದಾಗ ರಿಜಿಸ್ಟ್ರಾರ್‌ ಜನರಲ್‌ ಆಫ್‌ ಇಂಡಿಯಾ (ಆರ್‌ಜಿಐ) ಅವರು ವೀರಶೈವ ಲಿಂಗಾಯತ ಹಿಂದೂ ಧರ್ಮದ ಭಾಗವೇ ಹೊರತು ಸ್ವತಂತ್ರ ಧರ್ಮವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ಕಾರಣದಿಂದ 2011ರ ಜನಗಣತಿಯಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಸಂಕೇತ ನೀಡಿರಲಿಲ್ಲ. ಇದನ್ನು ಕರ್ನಾಟಕ ಸರಕಾರಕ್ಕೆ ತಿಳಿಸಲಾಗಿದೆ. ಆದರೂ ಈಗ ಮತ್ತೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವ ಪ್ರಸ್ತಾವ ಬಂದಿದೆ,'' ಎಂದು ನಖ್ವಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ