ಆ್ಯಪ್ನಗರ

ನಾಲ್ಕು ಭಾಷಾ ಕೌಶಲ ತರಬೇತಿ ಕೇಂದ್ರಗಳ ಸ್ಥಾಪನೆಗೆ ಶಿಕ್ಷಣ ಇಲಾಖೆ ಕಾರ್ಯೋನ್ಮುಖ

ಮೈಸೂರಿನ ಪ್ರಾದೇಶಿಕ ಇಂಗ್ಲಿಷ್‌ ಸಂಸ್ಥೆಯ ಮಾದರಿಯಲ್ಲೇ ರಾಜ್ಯ ಸರಕಾರ ...

Vijaya Karnataka 12 Jul 2019, 5:00 am
ಬೆಂಗಳೂರು: ಮೈಸೂರಿನ ಪ್ರಾದೇಶಿಕ ಇಂಗ್ಲಿಷ್‌ ಸಂಸ್ಥೆಯ ಮಾದರಿಯಲ್ಲೇ ರಾಜ್ಯ ಸರಕಾರ ನಾಲ್ಕು ಭಾಷಾ ಕೌಶಲ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಕಾರ್ಯೋನ್ಮುಖವಾಗಿದೆ.
Vijaya Karnataka Web linguistics traing center
ನಾಲ್ಕು ಭಾಷಾ ಕೌಶಲ ತರಬೇತಿ ಕೇಂದ್ರಗಳ ಸ್ಥಾಪನೆಗೆ ಶಿಕ್ಷಣ ಇಲಾಖೆ ಕಾರ್ಯೋನ್ಮುಖ


ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ನಾಲ್ಕು ಭಾಷಾ ಕೇಂದ್ರಗಳನ್ನು ಆರಂಭಿಸುವ ಸಂಬಂಧ ಶಿಕ್ಷಣ ಇಲಾಖೆಯು (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ) ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಿದೆ.

''ಇಂಗ್ಲಿಷ್‌ ಮಾತ್ರವಲ್ಲದೆ, ಕನ್ನಡ, ಹಿಂದಿ, ಸಂಸ್ಕೃತ ಹಾಗೂ ಇತರ ಭಾಷೆಗಳ ಬೆಳವಣಿಗೆಗೆ ಒತ್ತು ನೀಡುವುದು ಈ ಕೇಂದ್ರಗಳ ಸ್ಥಾಪನೆಯ ಮುಖ್ಯ ಉದ್ದೇಶವಾಗಿದೆ. ಈ ಕೇಂದ್ರಗಳು ಭಾಷಾ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವ ಕೇಂದ್ರಗಳಾಗಿಯೂ ಕಾರ್ಯನಿರ್ವಹಿಸಲಿದ್ದು'' ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು 'ವಿಕ'ಕ್ಕೆ ತಿಳಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ 2019ರ ಫೆಬ್ರವರಿ 8ರಂದು ಮಂಡಿಸಿದ ಬಜೆಟ್‌ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಭಾಷಾ ವಿಷಯಗಳ ಗುಣಮಟ್ಟದ ಬೋಧನೆಗೆ ಸರಕಾರಿ ಶಾಲಾ ಶಿಕ್ಷಕರಿಗೆ ಭಾಷಾ ವಿಷಯಗಳಲ್ಲಿ ನಿರಂತರ ತರಬೇತಿ ನೀಡಲು ಆಲೂರು ವೆಂಕಟರಾವ್‌ ಅವರ ಹೆಸರಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ಸುಸಜ್ಜಿತ ಭಾಷಾ ಕೌಶಲ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ