ಆ್ಯಪ್ನಗರ

95 ಪೌರಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 95 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಆದೇಶಿಸಿದೆ.

Vijaya Karnataka 14 Mar 2019, 5:00 am
ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 95 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಆದೇಶಿಸಿದೆ.
Vijaya Karnataka Web local body adminstration govt order
95 ಪೌರಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ


ಮೀಸಲು ವಿವಾದ ಕೋರ್ಟ್‌ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ 95 ಸಂಸ್ಥೆಗಳಿಗೆ ನಿಗದಿಯಂತೆ ಚುನಾವಣೆ ನಡೆದಿಲ್ಲ. ಹೀಗಾಗಿ, ಬಹುತೇಕ ಪೌರಸಂಸ್ಥೆಗಳ ಚುನಾಯಿತ ಕೌನ್ಸಿಲ್‌ಗಳ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಏಪ್ರಿಲ್‌ ಮತ್ತು ಮೇನÜಲ್ಲಿ ಕೆಲವು ಸಂಸ್ಥೆಗಳ ಅವಧಿ ಮುಗಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಿ, ನೂತನ ಕೌನ್ಸಿಲ್‌ ಅಸ್ತಿತ್ವಕ್ಕೆ ಬರುವವರೆಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ದೈನಂದಿನ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಗಳ ನೇಮಕಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ನಗರಸಭೆಗಳಿಗೆ ಜಿಲ್ಲಾಧಿಕಾರಿ, ಪುರಸಭೆಗಳಿಗೆ ಅಸಿಸ್ಟೆಂಟ್‌ ಕಮಿಷನರ್‌ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ತಹಶೀಲ್ದಾರ್‌ ದರ್ಜೆಯ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಲಾಗುತ್ತಿದೆ. ಹೊಸದಾಗಿ ವಾರ್ಡ್‌ವಾರು ಚುನಾವಣೆ ನಡೆದು ನೂತನ ಕೌನ್ಸಿಲ್‌ಗಳು ಅಸ್ತಿತ್ವಕ್ಕ್ಕೆ ಬರುವವರೆಗೆ ಈ ಆಡಳಿತಾಧಿಕಾರಿಗಳೇ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ