ಆ್ಯಪ್ನಗರ

ಲಾಕ್‌ಡೌನ್‌ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ - ಹೈಕೋರ್ಟ್‌ ಸೂಚನೆ

ಎಸ್‌ಓಪಿ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಏಕೆ ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಮ ಜರುಗಿಸಿಲ್ಲವೆಂಬ ಬಗ್ಗೆ ವಿವರಣೆ ನೀಡುವಂತೆ ಸರಕಾರಕ್ಕೆ ಸೂಚಿಸಿದ ಹೈಕೋರ್ಟ್‌, ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.

Vijaya Karnataka 17 Jul 2020, 8:24 pm

ಬೆಂಗಳೂರು: ಮಾಸ್ಕ್‌ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ಕೋವಿಡ್‌-19 ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಅವರು ಎಷ್ಟೇ ಪ್ರಭಾವಿಯಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ ಅದೇಶಿಸಿದೆ.
Vijaya Karnataka Web high court of karnataka


ಲೆಟ್ಸ್‌ ಕಿಡ್‌ ಫೌಂಡೇಷನ್‌ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ‌ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

‘‘ಎಸ್‌ಓಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಏಕೆ ವಿಪತ್ತು ನಿರ್ವಹಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಲ್ಲ? ರಾಜಕಾರಣಿಗಳು ಹಾಗೂ ವಿಐಪಿಗಳು ಎಂದ ಮಾತ್ರಕ್ಕೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದೆ ಸರಕಾರ ಕೈಕಟ್ಟಿ ಕೂರಬಾರದು. ಪ್ರಭಾವಿಗಳೆಂದು ತಾರತಮ್ಯ ಮಾಡುವುದು ಸರಿಯಲ್ಲ. ಎಷ್ಟೇ ಪ್ರಭಾವಿಯಾದರೂ ಎಸ್‌ಓಪಿ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲೇಬೇಕು’’ ಎಂದು ಆದೇಶಿಸಿತು.

ಎಸ್‌ಓಪಿ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಏಕೆ ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಮ ಜರುಗಿಸಿಲ್ಲವೆಂಬ ಬಗ್ಗೆ ವಿವರಣೆ ನೀಡುವಂತೆ ಸರಕಾರಕ್ಕೆ ಸೂಚಿಸಿದ ಕೋರ್ಟ್‌, ವಿಚಾರಣೆಯನ್ನು ಜು.24ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲರಾದ ಪುತ್ತಿಗೆ ರಮೇಶ್‌, ಜಿ.ಆರ್‌. ಮೋಹನ್‌ ವಾದ ಮಂಡಿಸಿ "ಬಳ್ಳಾರಿಯಲ್ಲಿ ನಡೆದ ಶಾಸಕ ಪಿ.ಟಿ. ಪರಮೇಶ್ವರ್‌ ನಾಯಕ್‌ ಪುತ್ರನ ಮದುವೆ ಸಮಾರಂಭದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಸೇರಿ ಭಾಗವಹಿಸಿದ್ದ ಇತರರು ಮಾಸ್ಕ್‌ ಧರಿಸಿರಲಿಲ್ಲ. ಸಾಮಾಜಿಕ ಅಂತರವೂ ಕಾಯ್ದುಕೊಂಡಿರಲಿಲ್ಲ. ಇನ್ನು, ರಾಜಕೀಯ ಪಕ್ಷಗಳ ಸಭೆಗಳಲ್ಲಿ ಮತ್ತು ಇತ್ತೀಚೆಗೆ ನಡೆದ ಕೆಂಪೇಗೌಡ ಪುತ್ಥಳಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜಕಾರಣಿಗಳು ಇದೇ ರೀತಿ ಎಸ್‌ಓಪಿ ಉಲ್ಲಂಘಿಸಿದ್ದಾರೆ. ಆದರೆ, ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆಯಡಿ ಯಾವ ಕ್ರಮವನ್ನೂ ಜರುಗಿಸಿಲ್ಲ’’ ಎಂದು ದೂರಿದರು.
'ಎಸ್‌ಸಿ, ಎಸ್‌ಟಿ ಕಾಯಿದೆ ಕಟ್ಟುನಿಟ್ಟಿನ ಜಾರಿಗೆ ಏನು ತೊಡಕು..?ʼ ಆಕ್ಷೇಪಣೆಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

5.37 ಕೋಟಿ ರೂ. ದಂಡ ಸಂಗ್ರಹ

ಈ ಮಧ್ಯೆ, ಸರಕಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಮಾ.24ರಿಂದ ಏ.14ರವರೆಗೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದವರಿಂದ 5.37 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದೆ.

ದಾಖಲಾದ ಪ್ರಕರಣಗಳು: 1,28,737

ಬಂಧಿಸಲ್ಪಟ್ಟವರು: 12,027

ವಶಕ್ಕೆ ಪಡೆಯಲಾದ ವಾಹನಗಳು: 1,12,994

ದಾಖಲಾದ ಎಫ್‌ಐಆರ್‌: 5623

ಒಟ್ಟು ದಂಡ ಸಂಗ್ರಹ: 5,37,05,800 ರೂ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ