ಆ್ಯಪ್ನಗರ

ಮಹದಾಯಿ ಅಧಿಸೂಚನೆ, ಸಂಭ್ರಮಾಚರಣೆ ಬೇಡವೆಂದ ರಮೇಶ್ ಜಾರಕಿಹೊಳಿ

ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದಕ್ಕೆ ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿನಂತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದು ಹೀಗೆ.

Vijaya Karnataka Web 28 Feb 2020, 4:23 pm
ಬೆಂಗಳೂರು: ಮಹದಾಯಿ ನದಿ ನೀರು ವಿವಾದ ಕುರಿತಾಗಿ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದ್ದರೂ ಕರ್ನಾಟಕದ ಜನರು ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ.
Vijaya Karnataka Web mahadayi water dispute notification minister ramesh jarkiholi reaction
ಮಹದಾಯಿ ಅಧಿಸೂಚನೆ, ಸಂಭ್ರಮಾಚರಣೆ ಬೇಡವೆಂದ ರಮೇಶ್ ಜಾರಕಿಹೊಳಿ


ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮಹಾದಾಯಿ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು.ಆದಷ್ಟು ಶೀಘ್ರ ಕಾಮಗಾರಿ ಆರಂಭಿಸುತ್ತೇವೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಸಿದ್ದವಿದೆ .ಅದನ್ನು ನ್ಯಾಯಾಧೀಕರಣಕ್ಕೆ ತೋರಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ” ಎಂದರು.

ಮಹದಾಯಿ ಅಧಿಸೂಚನೆ: ರಾಜ್ಯ ಪಾಲಿಗೆ ಸಿಕ್ಕಿದ್ದು ಏನೇನು? ಇಲ್ಲಿದೆ ವಿವರ

ಕಾಮಗಾರಿ ಆರಂಭಿಸಲು ನ್ಯಾಯಾಲಯ, ಪರಿಸರ ಇಲಾಖೆ ಹಾಗೂ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆಯಬೇಕಾಗಿದೆ. ಅತೀ ಶೀಘ್ರದಲ್ಲೇ ನಮ್ಮ ಪಾಲಿನ ನೀರಿನ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ.

ಆದರೆ ನೀರು ಭಾವನಾತ್ಮಕ ವಿಷಯವಾಗಿರುವುದರಿಂದ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಅವರು ವಿನಂತಿ ಮಾಡಿದರು.

ಮಹದಾಯಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಕಳಸಾ-ಬಂಡೂರಿ ಹಾದಿ ಸುಗಮ

ಮಹಾದಾಯಿ ಸೇರಿದಂತೆ ವಿವಿಧ ನೀರಾವರಿ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಇಚ್ಛೆ.ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತದೆ ಎಂದರು.

ಜುಲೈನಲ್ಲಿ ಮಹದಾಯಿ ವಿವಾದದ ಬಗ್ಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು ಬಳಿಕ ರಾಜ್ಯಕ್ಕೆ ಮತ್ತಷ್ಟು ಹೆಚ್ಚಿನ ಪಾಲು ಸಿಗುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ