ಆ್ಯಪ್ನಗರ

ಕಾಂಗ್ರೆಸ್‌ನಿಂದಲೂ ಮಹಾರಾಷ್ಟ್ರದಲ್ಲಿ ಪ್ರಚಾರ! ‘ಕೈ’ ಇಬ್ಬಗೆ ನೀತಿಗೆ ವಿರೋಧ

ಮಹಾರಾಷ್ಟ್ರ ಚುನಾವಣೆಯಲ್ಲಿ ಸಿಎಂ ಬಿಎಸ್‌ವೈ ಹಾಗೂ ಬಿಜೆಪಿ ಮುಖಂಡರ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಕೂಡಾ ಇದೀಗ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದೆ. ಕಾಂಗ್ರೆಸ್ ಇಬ್ಬಗೆ ನೀತಿ ಚರ್ಚೆಗೆ ಗ್ರಾಸವಾಗಿದೆ.

Vijaya Karnataka Web 17 Oct 2019, 4:42 pm
ಬೆಂಗಳೂರು: ಮಹಾರಾಷ್ಟ್ರ ಚುನಾವಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ಪ್ರಚಾರಕ್ಕೆ ತೆರಳಿದ್ದನ್ನು ರಾಜ್ಯ ಕಾಂಗ್ರೆಸ್ ಖಂಡಿಸಿತ್ತು. ಆದರೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪರವಾಗಿ ಮಹಾರಾಷ್ಟ್ರದಲ್ಲಿ ಮತಯಾಚನೆಗೆ ತೆರಳಿದ್ದಾರೆ. ಕಾಂಗ್ರೆಸ್ ಈ ಇಬ್ಬಗೆ ನೀತಿ ಇದೀಗ ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web maharashtra elaction


ಮಹಾರಾಷ್ಟ್ರದ ಚುನಾವಣೆಯಲ್ಲಿ ಅಲ್ಲಿನ ಸಿಎಂ ದೇವೇಂದ್ರ ಫಡ್ನವೀಸ್ ಪರವಾಗಿ ಬಿಎಸ್‌ವೈ ಹಾಗೂ ಡಿಸಿಎಂಗಳಾದ ಅಶ್ವಥ್ ನಾರಾಯಣ, ಲಕ್ಷಣ್ ಸವದಿ, ಸಂಸದೆ ಶಶಿಕಲಾ ಜೊಲ್ಲೆ ಚುನಾವಣಾ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಜಾಟ್ ವಿಧಾನಸಭಾ ಕ್ಷೇತ್ರದ ಸಾಂಕ್ ಗ್ರಾಮದಲ್ಲಿ ಪ್ರಚಾರ ನಡೆಸಿದ ಸಿಎಂ ಬಿಜೆಪಿ ಪರವಾಗಿ ಮತಯಾಚಿಸಿದ್ದರು. ಬಳಿಕ ಅಕ್ಕಾಲ್‌ಕೋಟಾ ವಿಧಾನಸಭಾ ಕ್ಷೇತ್ರದಲ್ಲೂ ಸಿಎಂ ಬಿಎಸ್‌ವೈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಸಿಎಂ ಹಾಗೂ ಬಿಜೆಪಿ ಮುಖಂಡರ ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ವಿರೋಧಿಸಿತ್ತು.

ಮಹಾರಾಷ್ಟ್ರ ಚುನಾವಣೆ: ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ

ರಾಜ್ಯದಲ್ಲಿ ಪ್ರವಾಹ ಸಂಕಷ್ಟಕ್ಕೆ ರಾಜ್ಯ ಸರಕಾರ ಸ್ಪಂದಿಸುವ ಬದಲು ಮಹಾರಾಷ್ಟ್ರ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಕಾಂಗ್ರೆಸ್ ಮುಖಂಡರಾದ ಈಶ್ವರ್ ಖಂಡ್ರೆ ಹಾಗೂ ವಿಎಸ್ ಉಗ್ರಪ್ಪ ಜಂಟಿ ಪತ್ರಿಕಾಗೋಷ್ಠಿಯಲ್ಲೂ ಸಿಎಂ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು.

ಆದರೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಕಾಂಗ್ರೆಸ್ ಈ ಇಬ್ಬಗೆ ನೀತಿ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಪ್ರವಾಹ ಸಂಕಷ್ಟ ಪರಿಸ್ಥಿತಿಗೆ ಸ್ಪಂದಿಸುವುದು ಕೇವಲ ಆಡಳಿತ ಪಕ್ಷದ ಕೆಲಸ ಮಾತ್ರವಲ್ಲ. ವಿರೋಧ ಪಕ್ಷವಾಗಿ ಜನರ ಸಂಕಷ್ಟಗಳನ್ನು ಸರಕಾರದ ಗಮನಕ್ಕೆ ತರಬೇಕಾದ ಜಾವಾಬ್ದಾರಿ ಕಾಂಗ್ರೆಸ್ ಮೇಲಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಮುಖಂಡರ ಪ್ರಚಾರವನ್ನು ಖಂಡಿಸಿ ಮಾತನಾಡಿದ ನೀವು ಇದೀಗ ಮಾಡುತ್ತಿರುವುದೇನು ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಅಕ್ಟೋಬರ್ 21 ರಂದು ಮಹಾರಾಷ್ಟ್ರ ವಿಧಾಸಭಾ ಚುನಾವಣೆ ನಡೆಯಲಿದ್ದು ಅಕ್ಟೋಬರ್ 24 ರಂದು ಫಲಿತಾಂಶ ಪ್ರಟಕಗೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ