ಆ್ಯಪ್ನಗರ

ಮಂಡ್ಯ ಸಾರ್ವತ್ರಿಕ ಚುನಾವಣೆಯಲ್ಲಿ ನಿಖಿಲ್‌ಗೆ ಅವಕಾಶ

ಮಂಡ್ಯ ಲೋಕಸಭೆ ಉಪಚುನಾವಣೆ ಸ್ಪರ್ಧೆಗೆ ಮಾಜಿ ಶಾಸಕ ಎಲ್‌ಆರ್‌...

Vijaya Karnataka 16 Oct 2018, 5:00 am
ಬೆಂಗಳೂರು: ಮಂಡ್ಯ ಲೋಕಸಭೆ ಉಪಚುನಾವಣೆ ಸ್ಪರ್ಧೆಗೆ ಮಾಜಿ ಶಾಸಕ ಎಲ್‌.ಆರ್‌.ಶಿವರಾಮೇಗೌಡ ಸೀಮಿತವಾಗಲಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
Vijaya Karnataka Web NIKHIL


ಪಕ್ಷದ ಬಹುಪಾಲು ಶಾಸಕರು ನಿಖಿಲ್‌ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಲು ಒತ್ತಾಯ ಮಾಡಿದರೂ, ಶಿವರಾಮೇಗೌಡ ಅವರಿಗೆ ಜೆಡಿಎಸ್‌ ವರಿಷ್ಠರು ಮಣೆ ಹಾಕಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ನಿಖಿಲ್‌ ಎಂಟ್ರಿ ಖಚಿತ ಎಂದು ಪಕ್ಷದ ಮೂಲಗಳು ಹೇಳಿವೆ.

ಸದ್ಯ ನಾಲ್ಕು ಸಿನಿಮಾಗಳ ನಟನೆಯಲ್ಲಿ ಭಾಗಿಯಾಗಿರುವ ಕಾರಣ ಸ್ಪರ್ಧೆಗೆ ನಿಖಿಲ್‌ ನಿರಾಕರಿಸಿದ್ದೂ ಶಿವರಾಮೇಗೌಡ ಸ್ಪರ್ಧೆಗೆ ಅವಕಾಶ ಸಿಗಲು ಕಾರಣ ಎನ್ನಲಾಗಿದೆ.

ಈ ಮಧ್ಯೆ, ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ''ಉಪಚುನಾವಣೆಯಲ್ಲಿ ಮಂಡ್ಯದಿಂದ ದೇವೇಗೌಡರ 3ನೇ ತಲೆಮಾರಿನ ರಾಜಕೀಯ ಪ್ರವೇಶವಾಗಲಿದೆ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು. ಶಿವರಾಮೇಗೌಡ ಅವರು ಅಭ್ಯರ್ಥಿಯಾಗಿರುವ ಕಾರಣ ಅದು ಸುಳ್ಳು ಎಂಬುದು ಸ್ಪಷ್ಟವಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸಾರ್ವಜನಿಕರ ಭಾವನೆ ಹಾಗೂ ಪಕ್ಷದ ಕಾರ್ಯಕರ್ತರ ಅಭಿಪ್ರಾಯಕ್ಕೆ ವಿರುದ್ಧವಾಗಿ ಹೋಗುವುದಿಲ್ಲ'' ಎಂದು ಮಾರ್ಮಿಕವಾಗಿ ಹೇಳಿದರು.

ಈ ಮಧ್ಯೆ ಶಿವಮೊಗ್ಗ ಕ್ಷೇತ್ರಕ್ಕೆ ಮೈತ್ರಿಕೂಟದ ಅಭ್ಯರ್ಥಿಯಾದ ಮಧುಬಂಗಾಪ್ಪ ಸ್ಥಿತಿಯೂ ಇದೇ ಆಗಲಿದ್ದು,ಸಾರ್ವತ್ರಿಕ ಚುನಾವಣೆ ಹೊತ್ತಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಕಣಕ್ಕಿಳಿಸಲಿದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ