ಆ್ಯಪ್ನಗರ

ಬಿಜೆಪಿ ಸೇರುವುದಿಲ್ಲ, ಬಾಹ್ಯ ಬೆಂಬಲ ನೀಡುತ್ತೇನೆ: ಸುಮಲತಾ

ಬಿಜೆಪಿ ಬೆಂಬಲದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ,''ಮಂಡ್ಯದ ಅಭಿವೃದ್ಧಿಯೊಂದೇ ನನ್ನ ಗುರಿ. ಈ ಹಿನ್ನಲೆಯಲ್ಲಿ ಮಂಡ್ಯ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ,'' ಎಂದು ಹೇಳಿದರು.

Vijaya Karnataka Web 27 May 2019, 12:57 pm
ಬೆಂಗಳೂರು: ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಿಜೆಪಿಗೆ ಸೇರ್ಪಡೆಗೊಳ್ಳುವುದಕ್ಕೆ ಅವಕಾಶವಿಲ್ಲ. ಆದರೆ, ನಿರ್ಧಾರಗಳಿಗೆ ಬಾಹ್ಯವಾಗಿ ಬೆಂಬಲಿಸಬಹುದು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ,''ಮಂಡ್ಯದ ಅಭಿವೃದ್ಧಿಯೊಂದೇ ನನ್ನ ಗುರಿ. ಈ ಹಿನ್ನಲೆಯಲ್ಲಿ ಮಂಡ್ಯ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ,'' ಎಂದು ಹೇಳಿದರು.

''ಸುನಾಮಿ ರೀತಿ ಬಿಜೆಪಿ ಗೆಲುವು ಸಾಧಿಸಿದೆ. ನನ್ನ ಗೆಲುವು ಒಂದು ರೀತಿಯಲ್ಲಿ ಇತಿಹಾಸ. ಮಂಡ್ಯದ ಪ್ರಜ್ಞಾವಂತ ಮತದಾರರಿಂದ ಇದು ಸಾಧ್ಯವಾಗಿದೆ. ನನ್ನ ಗೆಲುವಿಗೆ ಎಲ್ಲ ಪಕ್ಷದವರೂ ಸಹಕಾರವಿದೆ. ಬಿಜೆಪಿ ಅಭ್ಯರ್ಥಿಯನ್ನು ನಿಲ್ಲಿಸದೇ ಸಹಕರಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ , ಎಸ್‌.ಎಂ.ಕೃಷ್ಣ , ಇತರ ನಾಯಕರಿಗೆ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ. ಅದನ್ನು ಮಾಡಿದ್ದೇನೆ,'' ಎಂದು ಹೇಳಿದರು.

ನಾಲೆಗಳಿಗೆ ಕಾವೇರಿ ನೀರು ಹರಿಸುವ ಜವಾಬ್ದಾರಿ ಸಂಸದರ ಮೇಲಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಕಿರುವ ಸವಾಲಿಗೆ ಉತ್ತರಿಸಿ, ''ಮಂಡ್ಯದ ರೈತರೇ ನನ್ನ ಮೊದಲ ಆದ್ಯತೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಮೋದಿ ಸಂಪುಟದಲ್ಲಿ ನಾನು ಸಚಿವೆಯಾಗುತ್ತೇನೆ ಎಂಬುದೆಲ್ಲ ಊಹಾಪೋಹ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ