ಆ್ಯಪ್ನಗರ

ಮಂಗಳೂರು ಗೋಲಿಬಾರ್ ಪ್ರಕರಣ; ಗೃಹ ಸಚಿವರು ರಾಜೀನಾಮೆ ಕೊಡೋದಿಲ್ಲ - ಕೆ.ಎಸ್ ಈಶ್ವರಪ್ಪ

ಮಂಗಳೂರು ಪೊಲೀಸ್ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಸೇರಿದಂತೆ ಯಾರೂ ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧ ಅವರು ಕಿಡಿಕಾರಿದರು.

Vijaya Karnataka Web 23 Dec 2019, 4:36 pm
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಮೃತಪಟ್ಟಿದ್ದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಘಟನೆಗೆ ಹೊಣೆ ಹೊತ್ತು ಯಾರೂ ಕೂಡಾ ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web mangalore police fairing minister k s eshwarappa statement
ಮಂಗಳೂರು ಗೋಲಿಬಾರ್ ಪ್ರಕರಣ; ಗೃಹ ಸಚಿವರು ರಾಜೀನಾಮೆ ಕೊಡೋದಿಲ್ಲ - ಕೆ.ಎಸ್ ಈಶ್ವರಪ್ಪ


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೋಲಿಬಾರ್‌ ಘಟನೆಗೆ ಸಂಬಂಧಿಸಿದಂತೆ ಯಾರೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಕಾಂಗ್ರೆಸ್ ಪಕ್ಷದ ಕುತಂತ್ರ ರಾಜಕೀಯ ನಡೆಯೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ರಾಜ್ಯ ಸರಕಾರ ಹಾಗೂ ಬಿ.ಎಸ್‌ ಯಡಿಯೂರಪ್ಪ ಹೊಣೆ ಎಂದು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಆರೋಪಿಸಿವೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಗೋಲಿಬಾರ್‌ ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು: ಸಿದ್ದರಾಮಯ್ಯ ಪಟ್ಟು

ವಿರೋಧ ಪಕ್ಷಗಳ ಆರೋಪವನ್ನು ತಿರಸ್ಕರಿಸಿದ ಸಚಿವ ಕೆ.ಎಸ್ ಈಶ್ವರಪ್ಪ ಪೌರತ್ವ ಕಾಯ್ದೆಯ ಪರವಾಗಿ ರಾಜ್ಯದ ಜನರು ಇದ್ದಾರೆ. ಮಾಧ್ಯಮಗಳ ಸಮೀಕ್ಷೆಗಳ ಪ್ರಕಾರ ಜನರ ಬೆಂಬಲ ಪೌರತ್ವ ಕಾಯ್ದೆಯ ಪರವಾಗಿದೆ. ದೇಶದ ಮುಸ್ಲಿಮರಿಗೆ ಕಾಯ್ದೆಯಿಂದ ಅನ್ಯಾಯವಾಗುವುದಿಲ್ಲ ಎಂದರು.

ಆಗ ಸಿದ್ದರಾಮಯ್ಯ ಆಜ್ಞಾಪಾಲಕ..! ಈಗ ಮಂಗಳೂರಿಗೆ ಸಿದ್ದು ಬರದಂತೆ ತಡೆಯುವ ಕಾಯಕ..!

ಕಾಂಗ್ರೆಸ್ ಮುಸ್ಲಿಮರ ಓಟ್ ಬ್ಯಾಂಕ್‌ಗಾಗಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಯುಪಿಎ ಸರಕಾರದ ಅವಧಿಯಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಒಲವು ವ್ಯಕ್ತಪಡಿಸಿದ್ದರು. ಅವಾಗ ವಿರೋಧಿಸದ ಕಾಂಗ್ರೆಸ್ ಇವಾಗ ವಿರೋಧಿಸುತ್ತಿದೆ. ಈ ಮೂಲಕ ಹಿಂದೂ ಹಾಗೂ ಮುಸ್ಲಿಮರ ನಡುವೆ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ