ಆ್ಯಪ್ನಗರ

ಮಂಗಳೂರು ಗೋಲಿಬಾರ್‌ ಪ್ರಕರಣ, ತನಿಖೆಗೆ ಸಿದ್ಧವಾದ ಸರಕಾರ

ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ತನಿಖೆ ನಡೆಸಲು ಸಿದ್ಧವಾಗಿದ್ದು, ಎಸ್‌ಐಟಿ ರಚನೆಗೆ ಒಲವು ಹೊಂದಿದೆ. ಈ ಬಗ್ಗೆ ಭಾನುವಾರ ಸಿಎಂ ಸಭೆ ನಡೆಸಿದ್ದಾರೆ.

Vijaya Karnataka Web 23 Dec 2019, 6:44 am
ಬೆಂಗಳೂರು: ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ತನಿಖೆ ನಡೆಸಲು ಸಿದ್ಧವಾಗಿದ್ದು, ಎಸ್‌ಐಟಿ ರಚನೆಗೆ ಒಲವು ಹೊಂದಿದೆ.
Vijaya Karnataka Web Mangaluru


ಅಲ್ಪಸಂಖ್ಯಾತ ಸಮುದಾಯದ ಮುಖಂಡರು ನ್ಯಾಯಾಂಗ ತನಿಖೆಗೆ ಆಗ್ರಹಿಸಿರುವುದರಿಂದ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಹಾಗೂ ನಾನಾ ಸಂಘಟನೆ ಮುಖಂಡರು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತನಿಖೆ ನಡೆಸಲು ಮುಂದಾಗಿದ್ದು, ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹಾಗೂ ಹಿರಿಯ ಅಧಿಕಾರಿಗಳ ಜತೆಗೆ ಭಾನುವಾರ ಚರ್ಚೆ ನಡೆಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ''ತನಿಖೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ,'' ಎಂದರು. ''ಕಾಯಿದೆ ಬಗ್ಗೆ ಜನರಲ್ಲಿಅನಗತ್ಯವಾಗಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ರಾಜ್ಯದಲ್ಲಿ ಜನವರಿ ತಿಂಗಳಲ್ಲಿಕಾಯಿದೆ ಜಾರಿಯಾಗುಧಿತ್ತದೆ ಎಂದು ಸುಳ್ಳು ಮಾಹಿತಿ ಹಬ್ಬಿಸಲಾಗುಧಿತ್ತಿದೆ. ಈ ಬಗ್ಗೆ ಕೇಂದ್ರ ಸರಕಾರವೇ ದಿನಾಂಕ ನಿಗದಿ ಮಾಡಿಲ್ಲ. ಹೀಗಿರುವಾಗ ಜಾರಿ ಮಾಡಲು ಸಾಧ್ಯವೇ,''ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ