ಆ್ಯಪ್ನಗರ

17 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಇನ್ನೂ ಮೂವರು ಬಿಜೆಪಿ ಸೇರ್ತಾರೆ: ಬಿಎಸ್‌ವೈ

ಕರ್ನಾಟಕ ರಾಜಕೀಯ ಕ್ಷಿಪ್ರಕ್ರಾಂತಿಗೆ ಸದ್ಯ ಸ್ವಲ್ಪ ಬ್ರೇಕ್‌ ಬಿದ್ದಿದೆ. ಮಂಗಳವಾರದ ಸುಪ್ರೀಂ ಕೋರ್ಟ್‌ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಇದರ ಜತೆಗೆ ಗುರುವಾರದ ವಿಶ್ವಾಸಮತ ಯಾಚನೆ ಪರೀಕ್ಷೆ ಕುತೂಹಲ ಕೂಡ ಇದೆ.

Vijaya Karnataka Web 15 Jul 2019, 5:40 pm
ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ಶಾಸಕರ ರಾಜೀನಾಮೆ ಹಿಂದೆ ನಮ್ಮ ಕೈವಾಡ ಇಲ್ಲ ಎಂದು ಹೇಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಈಗ ಎಲ್ಲ ಶಾಸಕರ ನಮ್ಮ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ವಿಧಾನಸೌಧದಲ್ಲಿ ವಿಧಾನಸಭಾ ಕಾರ್ಯ ಕಲಾಪ ಸಲಹಾ ಸಮಿತಿ (ಬ್ಯುಸಿನೆಸ್‌ ಅಡ್ವೈಸರಿ ಕಮಿಟಿ) ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ ಅದರಲ್ಲಿ ಅವರು ಸೋಲುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಈಗಾಗಲೇ 15 ಶಾಸಕರು ಮುಂಬಯಯಿಯಲ್ಲಿದ್ದಾರೆ. ಇಬ್ಬರು ಪಕ್ಷೇತರರು ನಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನೂ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಶೀಘ್ರವೇ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾರೆ. ಈಗ ನೇರವಾಗಿ ರೆಸಾರ್ಟ್‌ಗೆ ತೆರಳಿ ಶಾಸಕರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ