ಆ್ಯಪ್ನಗರ

ಸಚಿವರಾಗುವವರ ಪಟ್ಟಿ ಕೋರ್‌ ಕಮಿಟಿ ಸಭೆಯಲ್ಲಿ ಫೈನಲ್‌; 11 ಹೊಸ ಶಾಸಕರಿಗೆ ಮಂತ್ರಿಗಿರಿ?

ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸದಿಲ್ಲಿಗೆ ವಾಪಸಾದ ಬಳಿಕ ಯಾವುದೇ ದಿನ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯುವ ನಿರೀಕ್ಷೆಯಿದೆ.

Vijaya Karnataka Web 2 Jan 2020, 9:40 pm
ಬೆಂಗಳೂರು: ಸಂಪುಟ ವಿಸ್ತರಣೆಗೂ ಮುನ್ನ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದ್ದು ಸಚಿವರಾಗುವವರ ಪಟ್ಟಿ ಸಿದ್ಧಪಡಿಸಲಾಗುತ್ತದೆ.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ


ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಖಚಿತವಾಗಿದೆ. ಹೊಸ ಶಾಸಕರ ಪೈಕಿ 11 ಮಂದಿ ಸಚಿವರಾಗುವ ಸಂಭವವವಿದೆ. ಬಿಜೆಪಿ ಸರಕಾರ ರಚನೆಗೆ ಕಾರಣರಾದ ಈ ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಮಟ್ಟದಲ್ಲೂವಿರೋಧವಿಲ್ಲ. ಆದರೆ, ಉಳಿದ ಸಚಿವ ಸ್ಥಾನಕ್ಕಾಗಿ ಮೂಲ ಬಿಜೆಪಿ ಶಾಸಕರು ಪೈಪೋಟಿಗೆ ಇಳಿದಿದ್ದಾರೆ. ಸಣ್ಣ ಪ್ರಮಾಣದ ಸಂಪುಟ ಪುನಾರಚನೆಗೂ ಒಲವು ತೋರಲಾಗುತ್ತಿದೆ.

ವರಿಷ್ಠರ ಸಮ್ಮುಖ ದಿಲ್ಲಿಯಲ್ಲಿ ನಡೆಸುವ ಸಭೆಯಲ್ಲೇ ಈ ಸಂಬಂಧ ಅಂತಿಮ ತೀರ್ಮಾನವಾಗಲಿದೆ.

ಈ ನಡುವೆ ಕೋರ್‌ ಕಮಿಟಿ ಸಭೆ ನಡೆಸಿ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗುತ್ತದೆ. ಜತೆಗೆ ಕಾಂಗ್ರೆಸ್‌ನ ರಿಜ್ವಾನ್‌ ಅರ್ಷದ್‌ ಶಾಸಕರಾಗಿ ಆಯ್ಕೆಯಾದದ್ದರಿಂದ ತೆರವಾಗುವ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬ ಬಗ್ಗೆಯೂ ಚರ್ಚೆಯಾಗಲಿದೆ.

ಶಿಕ್ಷಕ-ಪದವೀಧರ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಸಮಾಲೋಚಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ