ಆ್ಯಪ್ನಗರ

ಮೈತ್ರಿ ಸರಕಾರ ಬೀಳಿಸಿದ್ದು ನಾನು ಮತ್ತು ರಾಜಣ್ಣ: ರಮೇಶ್‌ ಜಾರಕಿಹೊಳಿ

ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಮತ್ತು ನಾನು ಸೇರಿಕೊಂಡು ಮೈತ್ರಿ ಸರಕಾರವನ್ನು ಬೀಳಿಸಿದ್ದು ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಜತೆಗೆ ರಾಜಣ್ಣ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದೇವೆ ಎಂದಿದ್ದಾರೆ.

Vijaya Karnataka Web 14 May 2020, 9:37 am
ತುಮಕೂರು: 'ನಾನು ಮತ್ತು ಮಧುಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಇಬ್ಬರು ಸೇರಿಕೊಂಡು ಮೈತ್ರಿ ಸರಕಾರವನ್ನು ಬೀಳಿಸಿದ್ದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.
Vijaya Karnataka Web ramesh


ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ತೊಳಚನಹಳ್ಳಿ ಬಳಿ ಬುಧವಾರ ಎತ್ತಿನಹೊಳೆ ಕುಡಿಯುವ ನೀರು ಯೋಜನೆಯ ಮೇಲ್ಗಾಲುವೆ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,''ಮೈತ್ರಿ ಸರಕಾರವನ್ನು ಬೀಳಿಸಬೇಕು ಎಂದು ನಿರ್ಧರಿಸಿದ್ದೆವು. ಅದರಂತೆ ಮಾಡಿದ್ದೇವೆ. ಕೆ.ಎನ್‌. ರಾಜಣ್ಣರನ್ನು ಕೂಡ ಬಿಜೆಪಿಗೆ ಆಹ್ವಾನಿಸಿದ್ದೇವೆ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ನೋಡಬೇಕಿದೆ,'' ಎಂದರು.

''ಜಲಸಂಪನ್ಮೂಲ ಇಲಾಖೆಗೆ ಅನುದಾನದ ಕೊರತೆ ಇಲ್ಲ. ಇಲಾಖೆಗೆ ಇನ್ನೂ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಗಳು ಸಿದ್ಧರಿದ್ದಾರೆ. ಎತ್ತಿನಹೊಳೆ ಯೋಜನೆಯು ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಿಗೆ ಕುಡಿಯುವ ನೀರನ್ನು ಒದಗಿಸುವ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾಲಾವಧಿಯೊಳಗೆ ಪೂರ್ಣಗೊಳಿಸಲಾಗುವುದು,'' ಎಂದೂ ರಮೇಶ್‌ ಜಾರಕಿಹೊಳಿ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಸಹ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ