ಆ್ಯಪ್ನಗರ

ಮೇಕೆದಾಟು, ದಿಲ್ಲಿಯಲ್ಲಿ ಸಂಸದರ ಪ್ರತಿಭಟನೆ

ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಕರ್ನಾಟಕದ ಸಂಸದರು ಪಕ್ಷ ಭೇದ ...

Vijaya Karnataka Web 28 Dec 2018, 5:00 am
ಬೆಂಗಳೂರು: ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಕರ್ನಾಟಕದ ಸಂಸದರು ಪಕ್ಷ ಭೇದ ಮರೆತು ಸಂಸತ್‌ ಭವನದ ಆವರಣದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
Vijaya Karnataka Web 27122-PTI12_27_2018_000081B


ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಅನಗತ್ಯವಾಗಿ ತಗಾದೆ ತೆಗೆಯುತ್ತಿದೆ. ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂಬುದು ರಾಜ್ಯ ಸಂಸದರ ಅಭಿಪ್ರಾಯವಾಗಿತ್ತು.

ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕೇಂದ್ರ ಸಂಪುಟ ಪ್ರತಿನಿಧಿಸುತ್ತಿರುವ ಡಿ.ವಿ. ಸದಾನಂದಗೌಡ, ಅನಂತಕುಮಾರ್‌ ಹೆಗಡೆ, ರಮೇಶ್‌ ಜಿಗಜಿಣಗಿ ಸೇರಿದಂತೆ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌, ಬಿ.ಕೆ.ಹರಿಪ್ರಸಾದ್‌, ಜೈರಾಮ್‌ ರಮೇಶ…, ಬಿಜೆಪಿಯ ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಷಿ, ಬಿ.ವೈ ರಾಘವೇಂದ್ರ ಮತ್ತಿತರ ಸಂಸದರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ