ಆ್ಯಪ್ನಗರ

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ, ಜೂನ್‌ 1ರವರೆಗೆ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

​ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijaya Karnataka 27 May 2020, 7:50 pm

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯ ತೀವ್ರತೆ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
Vijaya Karnataka Web Rain


ಮೇಲ್ಮೈ ಸುಳಿಗಾಳಿಯ ತೀವ್ರತೆ ಇನ್ನೂ ಇರುವುದರಿಂದ ಜೂನ್‌ 1 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ. ಮಳೆ ಬರುವ ವೇಳೆ 30 ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ, ವಾಹನ ಸವಾರರ ಪರದಾಟ

ಕಳೆದ 24 ಗಂಟೆಯಲ್ಲಿ ನುಗ್ಗೇಹಳ್ಳಿಯಲ್ಲಿ 40 ಮಿ.ಮೀ., ಮಾಲೂರು, ಹೊಸಕೋಟೆ, ಬೆಂಗಳೂರು ನಗರ, ಬೆಂಗಳೂರಿನ ಎಚ್‌ಎಎಲ್‌ನಲ್ಲಿ 30 ಮಿ.ಮೀ., ಕೃಷ್ಣರಾಜಪೇಟೆ, ಬೆಳ್ಳೂರಿನಲ್ಲಿ 20 ಮಿ.ಮೀ. ಮಳೆಯಾಗಿದೆ. ಈ ನಡುವೆ ಉತ್ತರ ಒಳನಾಡಿನಲ್ಲಿತಾಪಮಾನ ಏರಿದ್ದು, ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ