ಆ್ಯಪ್ನಗರ

ರಾಜ್ಯಕ್ಕೆ 3 RT-PCR ಪರೀಕ್ಷಾ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ ಮೈಕ್ರೋಸಾಫ್ಟ್‌

ಮೈಕ್ರೋಸಾಫ್ಟ್‌ನ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, “ಖಾಸಗಿ ಕಂಪನಿಗಳು ಕೋವಿಡ್ - 19 ವಿರುದ್ಧದ ಹೋರಾಟದಲ್ಲಿ ಸರಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ,” ಎಂದು ಹೇಳಿದರು.

Vijaya Karnataka 28 Jul 2020, 2:09 pm

ಬೆಂಗಳೂರು: ಅಮೆರಿಕಾ ಮೂಲದ ಮೈಕ್ರೋಸಾಫ್ಟ್ ಕಂಪನಿಯು ಕೊರೊನಾ ಸೋಂಕಿತರ ಪರೀಕ್ಷೆ ನಡೆಸಲು ಮೂರು ಆರ್‌ಟಿ-ಪಿಸಿಆರ್‌ ಪರೀಕ್ಷಾ ಯಂತ್ರಗಳನ್ನು ಕರ್ನಾಟಕ ಸರಕಾರಕ್ಕೆ ಕೊಡುಗೆಯಾಗಿ ನೀಡಿದೆ.
Vijaya Karnataka Web microsoft has contributed three rt pcr test machines to karnataka government
ರಾಜ್ಯಕ್ಕೆ 3 RT-PCR ಪರೀಕ್ಷಾ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ ಮೈಕ್ರೋಸಾಫ್ಟ್‌


ಈ ಸಂಬಂಧ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, “ಖಾಸಗಿ ಕಂಪನಿಗಳು ಕೋವಿಡ್ - 19 ವಿರುದ್ಧದ ಹೋರಾಟದಲ್ಲಿ ಸರಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ,” ಎಂದು ಹೇಳಿದರು.

ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಯಾವಾಗ ಕಡಿಮೆಯಾಗುತ್ತೆ ಕೊರೊನಾ ಸೋಂಕು?; ಎಲ್ಲರನ್ನು ಕಾಡುವ ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ, ಮೈಕ್ರೋಸಾಫ್ಟ್ ಕಂಪನಿಯ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಕುಮಾರ್, ಸಿಬ್ಬಂದಿ ಮುಖ್ಯಸ್ಥ ಸಂದೀಪ್ ಶ್ರೀವಾಸ್ತವ್, ಹಣಕಾಸು ವಿಭಾಗದ ನಿರ್ದೇಶಕ ಅಮರೇಶ್ ರಾಮಸ್ವಾಮಿ, ಅರವಿಂದ ಪ್ರಕಾಶ್ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ