ಆ್ಯಪ್ನಗರ

ಜನಾರ್ದನ ರೆಡ್ಡಿ ಇಂದು ಜಾಮೀನು ಅರ್ಜಿ ಸಲ್ಲಿಕೆ

ಭಾನುವಾರ ಬಂಧನಕ್ಕೆ ಒಳಗಾಗಿದ್ದ ರೆಡ್ಡಿ ಸೋಮವಾರವೇ ಜಾಮೀನು ಅರ್ಜಿ ಸಲ್ಲಿಸುವ ಸಿದ್ಧತೆ ನಡೆಸಿದ್ದರಾದರೂ ಕೇಂದ್ರ ಸಚಿವ ಅನಂತ್‌ಕುಮಾರ್‌ ಸಾವಿನಿಂದಾಗಿ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿತ್ತು.

Vijaya Karnataka Web 13 Nov 2018, 8:03 am
ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ಕೋರಿ ಮಂಗಳವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿದ್ದಾರೆ.
Vijaya Karnataka Web Janardana reddy


ಭಾನುವಾರ ಬಂಧನಕ್ಕೆ ಒಳಗಾಗಿದ್ದ ರೆಡ್ಡಿ ಸೋಮವಾರವೇ ಜಾಮೀನು ಅರ್ಜಿ ಸಲ್ಲಿಸುವ ಸಿದ್ಧತೆ ನಡೆಸಿದ್ದರಾದರೂ ಕೇಂದ್ರ ಸಚಿವ ಅನಂತ್‌ಕುಮಾರ್‌ ಸಾವಿನಿಂದಾಗಿ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿತ್ತು. ಪರಿಣಾಮ ಸೋಮವಾರವೂ ಜೈಲಿನಲ್ಲೇ ಕಳೆದ ರೆಡ್ಡಿ ಅವರು ಮಂಗಳವಾರ ಬೆಳಗ್ಗೆ ಒಂದನೇ ಸೆಷನ್ಸ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಮಂಗಳವಾರವೇ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ. ಆ್ಯಂಬಿಡೆಂಟ್‌ ಹಗರಣದಲ್ಲಿ ಕೈ ಬದಲಾವಣೆ ಆಗಿರುವ ಅರ್ಧ ಕ್ವಿಂಟಾಲ್‌ ಚಿನ್ನದ ಗಟ್ಟಿ ರೆಡ್ಡಿ ಅವರ ಕೈಗೆ ಹೋಗಿದ್ದು ಇವರಿಂದ ಅದು ಬೇರೆ ಕಡೆ ತಲುಪಿರಬಹುದು ಅಥವಾ ಚಿನ್ನ ಕರಗಿಸಿ ಬೇರೆ ಆಸ್ತಿಯಾಗಿ ಮಾರ್ಪಾಡೂ ಆಗಿರಬಹುದು ಎನ್ನುವ ಶಂಕೆ ಸಿಸಿಬಿ ಅಧಿಕಾರಿಗಳದ್ದಾಗಿದೆ.

ಭಾನುವಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಮ್ಯಾಂಡ್‌ ಅರ್ಜಿಯಲ್ಲಿ ಆರೋಪಿ ರೆಡ್ಡಿ ಅವರಿಂದ ಕೆಲವೊಂದು ವಸ್ತುಗಳನ್ನು ವಶಪಡಿಸಿಕೊಳ್ಳುವ ಅಗತ್ಯವಿದೆ ಎಂದು ಸಿಸಿಬಿ ಅಧಿಕಾರಿಗಳು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲಿರುವ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಷ್ಟಡಿಗೆ ಕೇಳುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ