ಆ್ಯಪ್ನಗರ

ಕೋವಿಡ್‌ ದೂರಗಾಮಿ ಪರಿಣಾಮಗಳ ಬಗ್ಗೆ ಅಧ್ಯಯನಕ್ಕೆ ತಜ್ಞ ವೈದ್ಯರ ಸಮಿತಿ ರಚನೆ

ಕೋವಿಡ್‌ ಸೋಂಕಿನಿಂದ ಗುಣಮುಖರಾದವರ ಮೇಲೆ ಉಂಟಾಗಿರುವ ದೂರಗಾಮಿ ಪರಿಣಾಮಗಳ ಕುರಿತಾಗಿ ಅಧ್ಯಯನ ನಡೆಸಲು ತಜ್ಞರ ಸಮಿತಿಯನ್ನು ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 20 Sep 2020, 2:22 pm
ಬೆಂಗಳೂರು: ಕೋವಿಡ್‌ ಸೋಂನಿಂದ ಗುಣಮುಖ ಹೊಂದಿದವರಲ್ಲಿ ಉಂಟಾಗಬಹುದಾದ ದೂರಗಾಮಿ ಪರಿಣಾಮಗಳ ಬಗ್ಗೆಅಧ್ಯಯನ ನಡೆಸಲು ವಿಶೇಷ ತಜ್ಞ ವೈದ್ಯರ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Vijaya Karnataka Web Dr. K. Sudhakar


ಈ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಮಾಹಿತಿ ನೀಡಿದ್ದು ಈ ತಜ್ಞರ ಸಮಿತಿ ಕೋವಿಡ್‌ ದೂರಗಾಮಿ ಪರಿಣಾಮಗಳ ಕುರಿತಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ಅಧಿವೇಶನದ ಮೊದಲ ದಿನದಂದೇ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಸಜ್ಜು!


“ಕೋವಿಡ್ ಸೋಂಕಿನಿಂದ ಗುಣಮುಖ ಹೊಂದಿದವರಲ್ಲಿ ಉಂಟಾಗಬಹುದಾದ ದೂರಗಾಮಿ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಒಂದು ವಿಶೇಷ ತಜ್ಞ ವೈದ್ಯರ ಸಮಿತಿ ರಚಿಸಲಾಗುವುದು. ಲಘು ಮತ್ತು ತೀವ್ರ ರೋಗಲಕ್ಷಣ ಹೊಂದಿದ್ದ ಮತ್ತು ವಿಶೇಷವಾಗಿ ಇತರೆ ಸಹ-ಅಸ್ವಸ್ಥತೆಗಳನ್ನು ಹೊಂದಿದ್ದ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲಾಗುವುದು” ಎಂದು ಸುಧಾಕರ್‌ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.


ತಜ್ಞರ ಸಮಿತಿ ನೀಡುವ ಅಧ್ಯಯನದ ಆಧಾರದ ಮೇರೆಗೆ ಕೋವಿಡ್-19 ಸೋಂಕಿತರ ದೂರಗಾಮಿ ಆರೋಗ್ಯದ ದೃಷ್ಟಿಯಿಂದ ನೂತನ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ