ಆ್ಯಪ್ನಗರ

ಬರಪೀಡಿತ 176 ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆಗೆ ಸೂಚನೆ

ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿರುವ ಸಚಿವರು, ಬರ ಪೀಡಿತ ತಾಲೂಕುಗಳಲ್ಲಿ ರಚಿಸಲಾಗಿರುವ ಕಾರ್ಯಪಡೆಗಳಿಗೆ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

Vijaya Karnataka Web 24 Apr 2019, 7:25 pm
ಬೆಂಗಳೂರು: ರಾಜ್ಯದಲ್ಲಿನ ಬರಗಾಲ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
Vijaya Karnataka Web ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ


ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿರುವ ಸಚಿವರು, ಬರ ಪೀಡಿತ ತಾಲೂಕುಗಳಲ್ಲಿ ರಚಿಸಲಾಗಿರುವ ಕಾರ್ಯಪಡೆಗಳಿಗೆ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

176ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದ್ದು, ಎಲ್ಲಿಯೂ ಕುಡಿಯುವ ನೀರಿನ ಬಗ್ಗೆ ದೂರು ಬಾರದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.ಬರ ಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿತ ಕೆಲಸಗಳನ್ನು ವಿಳಂಬ ಮಾಡದೆ ಆರಂಭಸಬೇಕು ಮತ್ತು ಜಿಲ್ಲಾಧಿಕಾರಿ ಬಳಿ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯನ್ನು ಬಳಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ನಿರ್ದೇಶಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ