ಆ್ಯಪ್ನಗರ

ಕೊರೊನಾ ನಿಯಂತ್ರಣ: ಕ್ವಾರಂಟೈನ್‌ನಲ್ಲಿರುವವರ ಕೈಗೆ ಇನ್ಮುಂದೆ ಬೀಳುತ್ತದೆ ಟ್ಯಾಗ್!

ರಾಜ್ಯದಲ್ಲಿ ಕೊರೊನಾ ವೈರಸ್‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮಗಳನ್ನು ಬಿಗಿಗೊಳಿಸಲು ಸರ್ಕಾರ ಮುಂದಾಗಿದೆ. ಇದರಂತೆ ಕ್ವಾರಂಟೈನ್‌ನಲ್ಲಿರುವ ಕೈಗೆ ಟ್ಯಾಗ್‌ ಹಾಕಲು ಚಿಂತನೆ ನಡೆಸಿದೆ ಎಂದು ಸಚಿವ ಆರ್‌. ಅಶೋಕ್ ತಿಳಿಸಿದ್ದಾರೆ.

Vijaya Karnataka Web 28 Jun 2020, 12:48 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ನಿಟ್ಟಿನಲ್ಲಿ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರಿಯಾದ ರೀತಿಯಲ್ಲಿ ಕ್ವಾರಂಟೈನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ವಾರಂಟೈನ್‌ನಲ್ಲಿರುವವರ ಕೈಗೆ ಇನ್ಮುಂದೆ ಟ್ಯಾಗ್ ಹಾಕುವ ಚಿಂತನೆಯನ್ನು ಸರ್ಕಾರ ಮಾಡುತ್ತಿದೆ.
Vijaya Karnataka Web home quarantine


ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕೋವಿಡ್‌ ಉಸ್ತುವಾರಿ ಸಚಿವ ಆರ್‌. ಅಶೋಕ್, ರಾಜ್ಯ ಸರ್ಕಾರ ಇಂತಹದೊಂದು ಚಿಂತನೆಯನ್ನು ಹೊಂದಿದೆ ಎಂದು ತಿಳಿಸಿದರು. ಹೋಂ ಕ್ವಾರಂಟೈನ್‌ಗೆ ಸೂಚನೆ ನೀಡಿದರೂ ಅದನ್ನು ಸರಿಯಾಗಿ ಪಾಲನೆ ಮಾಡದಿರುವ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದೆ.

ಕೊರೊನಾ ಅಟ್ಟಹಾಸ: ಕ್ವಾರಂಟೈನ್ ಮಾರ್ಗಸೂಚಿಯಲ್ಲಿ ಬದಲಾವಣೆ

ಅಲ್ಲದೆ ಕ್ವಾರಂಟೈನ್ ಸೀಲ್‌ ಗುರುತನ್ನು ಅಳಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವವರ ಕುರಿತಾಗಿ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದರಂತೆ 14 ದಿನಗಳ ಕಾಲ ಈ ಟ್ಯಾಗ್‌ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಯ ಕೈಯಲ್ಲಿರುತ್ತದೆ. ಅವರು ಎಲ್ಲಿ ಹೋದರೂ ಇದರಿಂದ ಮಾಹಿತಿ ಸಿಗುತ್ತದೆ. ಇದರಿಂದ ಪರಿಣಾಮಕಾರಿ ಕ್ವಾರಂಟೈನ್ ಜಾರಿಗೊಳಿಸುವುದು ಸರ್ಕಾರದ ಚಿಂತನೆ ಯಾಗಿದೆ.

ಇದೇ ವೇಳೆ ಮಾತನಾಡಿದ ಅವರು ಕೋವಿಡ್‌ 19 ಸೋಂಕಿತರಿಗೆ ಗುಣಮಟ್ಟದ ಆಹಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಟಾಸ್ಕ್‌ ಫೋರ್ಸ್ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಸೋಂಕು ನಿಯಂತ್ರಣದ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ಸಚಿವ ಅಶೋಕ್ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ