ಆ್ಯಪ್ನಗರ

ಕುಡಿಯುವ ನೀರಿನ ಯೋಜನೆ: ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ ಸೂಚನೆ

ಪ್ರಮುಖ ಕುಡಿಯುವ ನೀರಿನ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನದ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಅನುಮೋದನೆ ಪಡೆಯುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Karnataka Web 24 Nov 2020, 3:35 pm
ಬೆಂಗಳೂರು: ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಸೂಚನೆ‌ ನೀಡಿದ್ದಾರೆ.
Vijaya Karnataka Web ramesh jarakiholi


ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಂಪುಟ ವಿಸ್ತರಣೆ ವಿಳಂಬ: ಕುತೂಹಲ ಕೆರಳಿಸಿದ ರಮೇಶ್ ಜಾರಕಿಹೊಳಿ ಬಿಎಸ್‌ವೈ ಭೇಟಿ

ರಾಜ್ಯದ ನೀರಾವರಿಯ ಪ್ರಮುಖ ಯೋಜನೆಗಳಿಗೆ ಅರಣ್ಯ ಇಲಾಖೆಯ ಅನುಮೋದನೆ ಇನ್ನೂ ದೊರಕಿಲ್ಲ. ಪರಿಣಾಮವಾಗಿ ಯೋಜನೆಗಳು ಅನುಷ್ಠಾನಗೊಳ್ಳಲು ವಿಳಂಬವಾಗುತ್ತಿವೆ. ಈ ನಿಟ್ಟಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉನ್ನತ ಮಟ್ಟದ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರಾಧದೇವಿ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ