ಆ್ಯಪ್ನಗರ

ಕೋವಿಡ್‌ ಅವ್ಯವಹಾರ: ಸಿದ್ದರಾಮಯ್ಯ, ಡಿಕೆಶಿ ಆರೋಪ ಸತ್ಯಕ್ಕೆ ದೂರ ಎಂದ ಎಸ್.‌ಟಿ ಸೋಮಶೇಖರ್‌

ಕೋವಿಡ್‌ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸಹಕಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಹೇಳಿದ್ದಾರೆ.

Vijaya Karnataka Web 21 Jul 2020, 1:57 pm
ಬೆಂಗಳೂರು: ಕೋವಿಡ್‌ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನ ಈ ಇಬ್ಬರು ನಾಯಕರ ನಡುವೆಯೇ ಸಮನ್ವಯತೆ ಇಲ್ಲ ಎಂದರು.
Vijaya Karnataka Web st shomashekar


ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಲ್ಲೇ ಹೊಂದಾಣಿಕೆ ಇಲ್ಲ. ಡಿಕೆ ಶಿವಕುಮಾರ್ ಅವರ ಎದುರು ಅಸ್ತಿತ್ವಕ್ಕಾಗಿ ಹೋರಾಟ ಮಾಡಲು ಇಂತಹ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ ಎಂದು ಕಿಚಾಯಿಸಿದರು.

ಕೊರೊನಾ ಆತಂಕ: ಸಂಜೆ 5 ಕ್ಕೆ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಬಿಎಸ್‌ವೈ

ಇದೇ ರೀತಿ ಶಿವಕುಮಾರ್ ಸಹ ಮಾಡುತ್ತಿದ್ದಾರೆ. ಇದಕ್ಕೋಸ್ಕರವೇ ಸಚಿವರಾದ ಡಾ. ಅಶ್ವಥ್ ನಾರಾಯಣ, ಶ್ರೀರಾಮುಲು ಹಾಗೂ ಡಾ. ಸುಧಾಕರ್ ಅವರು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ವೈದ್ಯಕೀಯ ಸಲಕರಣೆಗಳ ಖರೀದಿಯ ಕುರಿತಾದ ಲೆಕ್ಕವನ್ನು ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಎಲ್ಲ ಸಚಿವರು ಸಹ ಕೋವಿಡ್ ಪ್ರದೇಶಗಳಿಗೆ , ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಎಲ್ಲಿಯೂ ಸಂಚರಿಸದ ಪ್ರತಿಪಕ್ಷದ ಈ ನಾಯಕರು ಸುಮ್ಮನೆ ಸುದ್ದಿಗಾರರ ಬಳಿ ಆರೋಪ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳ ನಿರ್ವಹಣೆಗೆ 2,200 ಸಿಬ್ಬಂದಿ ನೇಮಕ - ಯಡಿಯೂರಪ್ಪ

ಲಾಕ್ ಡೌನ್ ಪರಿಹಾರವಲ್ಲ

ವೈಯುಕ್ತಿಕವಾಗಿ ನಾನು ಲಾಕ್ ಡೌನ್ ವಿರೋಧಿ, ಕೆಲವು ತಾಂತ್ರಿಕ ಕಾರಣದಿಂದ ಈ ಬಾರಿ ಒಂದು ವಾರ ಕಾಲ ಲಾಕ್ ಡೌನ್ ಮಾಡಿ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದರು. ಲಾಕ್ ಡೌನ್ ಮಾಡುವುದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂಬುದು ಸುಳ್ಳು. ಇದರಲ್ಲಿ ಸಾರ್ವಜನಿಕರೂ ಸಹ ಎಚ್ಚರಿಕೆ ವಹಿಸಬೇಕು ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸಮಿತಿ ರಚನೆ ಮಾಡಲಾಗಿದೆ

ಸಾರ್ವಜನಿಕರಲ್ಲಿ ಅರಿವು ಜಾಸ್ತಿ ಇದೆ. ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆ ಮಾಡಲಾಗುತ್ತಿದೆ. ಇನ್ನು ಕೆಲವರು ಆರೋಗ್ಯವಾಗಿದ್ದರೂ ಪರೀಕ್ಷೆ ಮಾಡಿ ಎಂಬ ದೂರುಗಳು ಕೇಳಿಬಂದಿವೆ. ಅದಕ್ಕೆ ಅರಿವು ಮೂಡಿಸಲಾಗುತ್ತದೆ. ಒಂದು ಝೋನ್ ಗೆ ಐವರು - ಆರು ಮಂದಿಯಂತೆ ಸಮಿತಿ ರಚಿಸಿ ಆಶಾ ಕಾರ್ಯಕರ್ತೆಯರನ್ನೂ ಅದಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ