ಆ್ಯಪ್ನಗರ

ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ 20 ಕೈ ಶಾಸಕರ ಒತ್ತಾಯ

ಕಳೆದ ರಾತ್ರಿ ನಡೆದ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎದರೇ ಸಿಎಂ ಸ್ಥಾನದಿಂದ ಕುಮಾರಸ್ವಾಮಿ ಅವರನ್ನು ಕೆಳಗಿಳಿಸುವಂತೆ ಶಾಸಕರು ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Vijaya Karnataka Web 20 Jan 2019, 2:18 pm
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ 20ಕ್ಕೂ ಅಧಿಕ ಶಾಸಕರು ಒತ್ತಾಯಿಸಿದ್ದಾರೆ.
Vijaya Karnataka Web hdk


ಕಳೆದ ರಾತ್ರಿ ನಡೆದ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎದುರೆ, ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಶಾಸಕರು ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕೈ ಶಾಸಕರ ಮಾರಾಮಾರಿ

ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ಪೈಕಿ ಬಳ್ಳಾರಿ ಜಿಲ್ಲೆ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ನಡುವೆ ಶನಿವಾರ ರಾತ್ರಿ ಗಲಾಟೆ ಆಗಿದೆ ಎಂಬ ವಿಷಯ ಹೊರಬಿದ್ದಿದೆ.

ಶನಿವಾರ ವಿಧಾನ ಸೌಧದಲ್ಲಿ ನಡೆದ ಮೈನಿಂಗ್ ಸಂಬಂಧಿತ ಸಭೆಯಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಮಾತಿನ ಚಕಮಕಿ ನಡೆದು ಮನಸ್ತಾಪ ಆಗಿತ್ತು ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ಶಾಸಕ ಆನಂದ್ ಸಿಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ