ಆ್ಯಪ್ನಗರ

ದೆಹಲಿ ಧಾರ್ಮಿಕ ಸಭೆಯಲ್ಲಿ ರಾಜ್ಯದ 300ಕ್ಕೂ ಹೆಚ್ಚು ಮಂದಿ ಭಾಗಿ, ವೈರಸ್ ಹಬ್ಬುವ ಭೀತಿ!

ದೆಹಲಿಯ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕರ್ನಾಟಕದ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 1 Apr 2020, 11:10 am
ಬೆಂಗಳೂರು: ದೆಹಲಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಸಭೆಯಲ್ಲಿ ಕರ್ನಾಟಕದ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದು ತಿಳಿದು ಬಂದಿದೆ.
Vijaya Karnataka Web Nizamuddin


ತಬ್ಲೀಗ್ ಜಮಾತ್‌ ಸಂಘಟನೆಯು ದೆಹಲಿಯ ನಿಜಾಮುದ್ದೀನ್ ಕೇಂದ್ರದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ ಸುಮಾರು 300 ಜನ ಭಾಗವಹಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಲ್ಲಿ 40 ಜನರನ್ನು ಪತ್ತೆ ಮಾಡಲಾಗಿದ್ದು, ಎಲ್ಲರನ್ನೂ ಕ್ವಾರೆಂಟೈನ್ ಮಾಡಲಾಗುತ್ತಿದೆ. ಇದರಲ್ಲಿ 12 ಮಂದಿಯ ಕೋವಿಡ್ 19 ಪರೀಕ್ಷೆ ವರದಿ ನೆಗೆಟಿವ್ ಎಂದಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.



ತಮ್ಮ ಮತ್ತೊಂದು ಟ್ವೀಟ್ ನಲ್ಲಿ ಧಾರ್ಮಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಸಿಕ್ಕಿದ್ದು, ಇದರಲ್ಲಿ 12 ಜನರನ್ನು ಪತ್ತೆ ಹಚ್ಚಿ ಕ್ವಾರೆಂಟೈನ್ ಮಾಡಲಾಗಿದೆ. ಮಿಕ್ಕಂತೆ ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದು ಕೊಂಡಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರೆಂಟೈನ್ ನಲ್ಲಿ ಇಡಲಾಗುವುದು ಎಂದಿದ್ದಾರೆ.

ವೈರಸ್ ಹಬ್ಬಿಸಿದ ಧಾರ್ಮಿಕ ಸಭೆ, ಆಯೋಜಕನ ವಿರುದ್ಧ ಕೇಸು ಜಡಿದ ದಿಲ್ಲಿ ಪೊಲೀಸ್



ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ (ಬಂಗ್ಲೇವಾಲೆ) ಮಸೀದಿಯಲ್ಲಿ ತಬ್ಲೀಗ್ ಜಮಾತ್‌ ಸಂಘಟನೆ ಮಾರ್ಚ್ 1ರಿಂದ 15ರವರೆಗೆ ಧಾರ್ಮಿಕ ಸಭೆಯನ್ನು ನಡೆಸಿತ್ತು. ಈ ಸಭೆಯಲ್ಲಿ ದೇಶ-ವಿದೇಶಗಳ 8000ಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ