ಆ್ಯಪ್ನಗರ

ಮುಧೋಳ ಸ್ಫೋಟ ಪ್ರಕರಣ: ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌‌ನ ಡಿಸ್ಟಿಲರಿ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡು 6 ಕಾರ್ಮಿಕರು ದುರ್ಮರಣವನ್ನಪ್ಪಿ ಮತ್ತಿಬ್ಬರು ಗಾಯಗೊಂಡ ದಾರುಣ ಘಟನೆ ಭಾನುವಾರ ನಡೆದಿದೆ.

Vijaya Karnataka Web 16 Dec 2018, 3:25 pm
ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಸಕ್ಕರೆ ಕಾರ್ಖಾನೆ ಯಲ್ಲಿನ ಸಂಸ್ಕರಣಾ ಘಟಕದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 6 ಜನ ಮೃತ ಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
Vijaya Karnataka Web Blast 2


ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬಾಗಲಕೋಟೆ, ವಿಜಾಪುರ, ಹುಬ್ಬಳ್ಳಿ ಜಿಲ್ಲೆಗಳಿಂದ ಆಂಬ್ಯುಲೆನ್ಸ್ ಗಳನ್ನು ಕಳುಹಿಸಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸುವಂತೆ ಹಾಗೂ ಘಟನೆಯ ಪೂರ್ಣ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸಲು ಸಹ ಅವರು ಸೂಚನೆ ನೀಡಿದ್ದಾರೆ.

ಮುಧೋಳದ ಡಿಸ್ಟಿಲರಿ ಘಟಕದಲ್ಲಿ ಬಾಯ್ಲರ್ ಸ್ಫೋಟ: ಆರು ಮಂದಿ ಸಾವು

ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌‌ನ ಡಿಸ್ಟಿಲರಿ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡು 6 ಕಾರ್ಮಿಕರು ದುರ್ಮರಣವನ್ನಪ್ಪಿ ಮತ್ತಿಬ್ಬರು ಗಾಯಗೊಂಡ ದಾರುಣ ಘಟನೆ ಭಾನುವಾರ ನಡೆದಿದೆ.

ಸಕ್ಕರೆ ಉತ್ಪಾದನೆ ಬಳಿಕ ಉಳಿಯುವ ತ್ಯಾಜ್ಯದಿಂದ ಮಿಥೇನ್ ತಯಾರಿಸುವ ಘಟಕದಲ್ಲಿ ಸ್ಫೋಟವಾಗಿದೆ. ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡ ಇಬ್ಬರು ಕಾರ್ಮಿಕರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ