ಆ್ಯಪ್ನಗರ

ಮಂಗಳವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಇದೇ ಮಂಗಳವಾರ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

Vijaya Karnataka Web 25 Aug 2019, 12:40 pm
ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಇದೇ ಮಂಗಳವಾರ (27-8-2019) ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿದೆ.
Vijaya Karnataka Web nalin kumar kateel


ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಇಂದು (ಭಾನುವಾರ) ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ನಿರಂಜನ್ ಶೆಟ್ಟಿ ಮತ್ತು ಸುಶೀಲಾ ಶೆಟ್ಟಿ ದಂಪತಿಯ ಪುತ್ರ ನಳೀನ್‌ ಕುಮಾರ್‌ ಕಟೀಲ್‌ ಅವರು ಮೂರನೇ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಆರ್‌ಎಸ್‌ಎಸ್‌ನ ಪೂರ್ಣಾವಧಿ ಪ್ರಚಾರಕರಾಗಿ 12 ವರ್ಷಗಳ ಕಾಲ ಸಂಘಟನೆಗಾಗಿ ದುಡಿದಿದ್ದು, ಪ್ರಖರ ಹಿಂದುತ್ವವಾದಿ ಎಂದು ಹೆಸರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ