ಆ್ಯಪ್ನಗರ

ಪಾದರಾಯನಪುರ ಗಲಬೆ: ಆರೋಪಿಗಳ ವಿರುದ್ಧ ಉ. ಪ್ರದೇಶ ಮಾದರಿಯ ಕ್ರಮವಾಗಲಿ- ಕಟೀಲ್‌

ಬೆಂಗಳೂರಿನ ಪಾದರಾಯನಪುರ ಗಲಬೆಯ ಆರೋಪಿಗಳ ವಿರುದ್ಧ ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

Vijaya Karnataka Web 20 Apr 2020, 1:47 pm
ಮಂಗಳೂರು: ಬೆಂಗಳೂರಿನ ಪಾದರಾಯನಪುರ ಗಲಬೆಯ ಆರೋಪಿಗಳ ವಿರುದ್ಧ ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
Vijaya Karnataka Web nalin kumar kateel


ನಗರದ ಸ್ಟೇಟ್ ಬ್ಯಾಂಕ್ ಬಳಿ ಸೋಮವಾರ ತಾತ್ಕಾಲಿಕ ಮಾರುಕಟ್ಟೆ ಕಾಮಗಾರಿ ಆರಂಭದಲ್ಲಿ ಪಾಲ್ಗೊಂಡು ಬಳಿಕ ಅವರು ಸುದ್ದಿಗಾರರು ಜತೆ ಮಾತನಾಡಿದರು. ವೈರಸ್‍ಗೆ ಜಾತಿ, ಮತ ಇಲ್ಲ. ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆದರೆ ಪಾದರಾಯನಪುರದಲ್ಲಿ ಕಾನೂನು ಉಲ್ಲಂಘಿಸಲಾಗಿದೆ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ ಕುರಿತು ಗೃಹಸಚಿವರ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಪಾದರಾಯನಪುರದಲ್ಲಿ ಲಾಕ್‌ಡೌನ್‌ ನಿಯಮಗಳ ಉಲ್ಲಂಘನೆ ಜತೆಗೆ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಅಂತಹ ಘಟನೆ ನಡೆಯಬಾರದು. ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ ಎಂದು ಒತ್ತಾಯಿಸಿದ್ದಾರೆ.

ಪಾದರಾಯನಪುರ ಪ್ರಕರಣ: ಸಿ.ಟಿ. ರವಿ, ಆರ್.‌ ಅಶೋಕ್‌ ಹೇಳಿದ್ದೇನು?

ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ. ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಖಂಡನೀಯ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದೊಂದು ರಾಷ್ಟ್ರ ವಿರೋಧಿ ಕೃತ್ಯ ಎಂದು ಕಿಡಿಕಾರಿದರು.

ಪಾದರಾಯನಪುರ ಪುಂಡರ ಬೆಂಬಲಕ್ಕೆ ನಿಂತ ಜಮೀರ್‌ ಅಹಮದ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ