ಆ್ಯಪ್ನಗರ

ಬಾಳಿಗ ಕೊಲೆ ಪ್ರಕರಣ; ಶೆಣೈ ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್‌ ಶೆಣೈಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿದ್ದ ...

Vijaya Karnataka 27 Mar 2019, 5:00 am
ಬೆಂಗಳೂರು: ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್‌ ಶೆಣೈಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Vijaya Karnataka Web hamer


ವಿನಾಯಕ ಬಾಳಿಗ ಸಹೋದರಿ ಅನುರಾಧಾ ಬಾಳಿಗ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಬಿ.ಎ.ಪಾಟೀಲ್‌ ಅವರಿದ್ದ ಏಕಸದಸ್ಯಪೀಠ ಮಂಗಳವಾರ ಈ ಆದೇಶ ನೀಡಿದೆ.

''ಆರೋಪಿ ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವುದಕ್ಕೆ ಬಲವಾದ ಸಾಕ್ಷ್ಯಗಳಿಲ್ಲ. ಹಾಗಾಗಿ ಕಾರಣವಿಲ್ಲದೆ ಅವರಿಗೆ ಮಂಜೂರು ಮಾಡಿರುವ ಜಾಮೀನನ್ನು ರದ್ದುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ''ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲರು ''ಮಂಗಳೂರಿನ ವೆಂಕಟರಮಣ ದೇವಸ್ಥಾನ ಮತ್ತು ಕಾಶಿಮಠದ ಕಾರ್ಯ ಚಟುವಟಿಕೆಯಿಂದ ನರೇಶ್‌ ಶೆಣೈ ದೂರ ಉಳಿಯಬೇಕೆಂದು ನ್ಯಾಯಾಲಯ ಷರತ್ತು ವಿಧಿಸಿತ್ತು. ಈ ಷರತ್ತನ್ನು ನರೇಶ್‌ ಶೆಣೈ ಉಲ್ಲಂಘಿಸಿದ್ದಾರೆ.ಆದ್ದರಿಂದ ಅವರ ಜಾಮೀನು ರದ್ದುಗೊಳಿಸಬೇಕು ''ಎಂದು ನ್ಯಾಯಪೀಠವನ್ನು ಕೋರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ