ಆ್ಯಪ್ನಗರ

ರಾಜ್ಯದ 9 ಕೇಂದ್ರಗಳಲ್ಲಿ ಮೇ 5ಕ್ಕೆ ನೀಟ್‌

ವೈದ್ಯ ಹಾಗೂ ದಂತ ವೈದ್ಯ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌-ಯುಜಿ) 2019ರ ಮೇ 5 ರಂದು ನಿಗದಿಯಾಗಿದ್ದು, ರಾಜ್ಯದ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Vijaya Karnataka 3 Nov 2018, 5:30 am
ಬೆಂಗಳೂರು: ವೈದ್ಯ ಹಾಗೂ ದಂತ ವೈದ್ಯ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌-ಯುಜಿ) 2019ರ ಮೇ 5 ರಂದು ನಿಗದಿಯಾಗಿದ್ದು, ರಾಜ್ಯದ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
Vijaya Karnataka Web NEET


ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹಾಗೆಯೇ, ಕನ್ನಡ, ಇಂಗ್ಲಿಷ್‌, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಉರ್ದು ಸೇರಿದಂತೆ 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದುವರೆಗೆ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನೀಟ್‌ ಪರೀಕ್ಷೆಯನ್ನು ನಡೆಸುತ್ತಿತ್ತು. ಈ ವರ್ಷದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಪರೀಕ್ಷೆಯನ್ನು ನಿರ್ವಹಿಸುತ್ತಿದೆ.

ಅಭ್ಯರ್ಥಿಗಳಿಗೆ ನ. 1ರಿಂದ 30ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸಾಮಾನ್ಯವಾಗಿ ಬೆಳಗ್ಗೆಯೇ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಹೊರ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಾರಿ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ 1400 ರೂ. ಹಾಗೂ ಪರಿಶಿಷ್ಟ ಜಾತಿ, ಪಂಗಡ, ವಿಶೇಷಚೇತನರು, ತೃತೀಯಲಿಂಗಿಗಳಿಗೆ 750 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಎನ್‌ಟಿಎ ವೆಬ್‌ಸೈಟ್‌ನಿಂದ ಏಪ್ರಿಲ್‌ 15ರಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಮೇ 5ರಂದು ಪರೀಕ್ಷೆ ನಡೆಯಲಿದ್ದು, ಜೂನ್‌ 5ರಂದು ಫಲಿತಾಂಶ ಘೋಷಿಸುವುದಾಗಿ ಎನ್‌ಟಿಎ ಪ್ರಕಟಿಸಿದೆ.

ಪರೀಕ್ಷೆಯ ಮಾಹಿತಿ

11 ಭಾಷೆಯಲ್ಲಿ ಪರೀಕ್ಷೆ

9 ಕೇಂದ್ರಗಳಲ್ಲಿ ಪರೀಕ್ಷೆ

ಜೂನ್‌ 5ಕ್ಕೆ ಫಲಿತಾಂಶ ಪ್ರಕಟ

ಸಿಬಿಎಸ್‌ಇ ಬದಲು ಎನ್‌ಟಿಎಯಿಂದ ಪರೀಕ್ಷೆ ನಿರ್ವಹಣೆ

ಪರೀಕ್ಷೆಯ ಸಮಯ ಈ ಬಾರಿ ಮಧ್ಯಾಹ್ನ 2ರಿಂದ

ಏ.15ರಿಂದ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅವಕಾಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ