ಆ್ಯಪ್ನಗರ

ಹೊಸ ವರ್ಷದ ದಿನ ಮತ್ತೆ ಮೂರು ಹೊಸ‌ ಕೊರೊನಾ ಪ್ರಕರಣ: ರಾಜ್ಯದಲ್ಲಿ 10ಕ್ಕೆ ಏರಿಕೆ

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸುತ್ತಿದೆ. ದೇಶದಲ್ಲಿ ಹೊಸ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ದೇಶದಲ್ಲಿ ಶುಕ್ರವಾರ ಮತ್ತೆ ನಾಲ್ವರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ.

Vijaya Karnataka Web 1 Jan 2021, 5:22 pm
ಬೆಂಗಳೂರು: ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ರೂಪಾಂತರ ಕೊರೊನಾ ವೈರಸ್‌ ಈಗ ಕರ್ನಾಟಕದಲ್ಲೂ ಆತಂಕ ಮೂಡಿಸಿದೆ. ಹೊಸ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ 10ಕ್ಕೆ ಏರಿಕೆಯಾಗಿದೆ.
Vijaya Karnataka Web ರೂಪಾಂತರ ಕೊರೊನಾ
ರೂಪಾಂತರ ಕೊರೊನಾ


ಬೆಂಗಳೂರಿನ ಮೂವರಲ್ಲಿ ಕೊರೊನಾ ಪಾಸಿಟಿವ್‌ ಕಂಡುಬಂದಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಹೊಸ ಕೊರೊನಾ ಸೋಂಕು ಪ್ರಕರಣಗಳು ಕಂಡುಬಂದಿತ್ತು.

ಈಗ ಹೊಸ ವರ್ಷದ ದಿನವೇ ಮೂರು ಪ್ರಕರಣಗಳು ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ರೂಪಾಂತರ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸುತ್ತಿದೆ. ದೇಶದಲ್ಲಿ ಶುಕ್ರವಾರ ಮತ್ತೆ ನಾಲ್ವರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ.

ಇದರೊಂದಿಗೆ ದೇಶದಲ್ಲಿ ಹೊಸ ಪ್ರಭೇದದ ಕೊರೊನಾ ಸೋಂಕಿತರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ