ಆ್ಯಪ್ನಗರ

KSRTC E-Bus : ಹೊಸದಾಗಿ ರಾಜ್ಯದ ಐದು ನಗರಗಳಿಗೆ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್‌ ಬಸ್‌ ಸೇವೆ ಆರಂಭ

KSRTC Electric Bus Service: ಮೈಸೂರು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್‌ ಬಸ್‌ ಸೌಲಭ್ಯವು ರಾಜ್ಯದ ಇನ್ನು ಮುಂದೆ ರಾಜ್ಯದ ಐದು ನಗರಗಳಿಗೂ ಸಿಗಲಿದೆ. ಹೊಸ 25 ಕೆಎಸ್‌ಆರ್‌ಟಿಸಿ ಇ ಬಸ್‌ಗಳಿಗೆ ಮುಖ್ಯಮಂತ್ರಿಗಳು ಸೋಮವಾರ ಚಾಲನೆ ನೀಡಿದರು.

Authored by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 20 Mar 2023, 7:16 pm

ಹೈಲೈಟ್ಸ್‌:

  • ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭ.
  • ಮೈಸೂರು ಬೆಂಗಳೂರು ಮಾತ್ರವಲ್ಲದೇ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದು.
  • 25 ಕೆಎಸ್‌ಆರ್‌ಟಿಸಿ ಇ ಬಸ್‌ಗಳಿಗೆ ಮುಖ್ಯಮಂತ್ರಿಗಳು ಸೋಮವಾರ ಚಾಲನೆ ನೀಡಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಕೆಎಸ್‌ಆರ್‌ಟಿಸಿ ಇ ಬಸ್‌
ಕೆಎಸ್‌ಆರ್‌ಟಿಸಿ ಇ ಬಸ್‌
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಮೈಸೂರು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದು.
ಸೋಮವಾರ ಹೊಸ 25 ಬಸ್‌ ಇವಿ ಪವರ್‌ ಪ್ಲಸ್‌ ಬಸ್‌ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ 50 ಅಂತರ ನಗರ ಹವಾನಿಯಂತ್ರಿತ “ಇವಿ ಪವರ್ ಪ್ಲಸ್” ವಿದ್ಯುತ್ ಚಾಲಿತ ವಾಹನ ಸೌಲಭ್ಯ ನೀಡುವ ಯೋಜನೆ ಇದಾಗಿದೆ. ಈ ಪೈಕಿ ಮೊದಲ ಹಂತವಾಗಿ 25 ಬಸ್‌ಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕ ಮತ್ತು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಚಂದ್ರಪ್ಪ ಉಪಸ್ಥಿತರಿದ್ದರು.


ಈಗಾಗಲೇ ಬೆಂಗಳೂರು ಮತ್ತು ಮೈಸೂರಿನ ನಡುವೆ ಎಲೆಕ್ಟ್ರಿಕ್‌ ಬಸ್‌ ಸಂಚರಿಸುತ್ತಿತ್ತು. ಹೊಸದಾಗಿ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ನಗರಗಳಿಗೆ ಆರಂಭಿಸಲಾಗುತ್ತಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಶುರು: ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರಿಗೆ ಶುಲ್ಕದ ಹೊರೆ

ಮೇಕ್ ಇನ್ ಇಂಡಿಯಾ ಬಸ್‌ಗಳು

ಕೆಎಸ್‌ಆರ್‌ಟಿಸಿ ಭಾರತ ಸರ್ಕಾರದ “ಮೇಕ್ ಇನ್ ಇಂಡಿಯಾ” ವಿದ್ಯುತ್ ಬಸ್ ಫೇಮ್-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಯೋಜಿಸಿದೆ. ಈ ಪೈಕಿ 25 ವಾಹನಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಉಳಿದ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

Karnataka Bus Strike: ಈ ಸಲದ ಯುಗಾದಿಗೆ KSRTC ಬಸ್‌ ಇರೋದು ಡೌಟ್‌! ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ!

ಗ್ರಾಮೀಣ ಸಾರಿಗೆ ಬಲಪಡಿಸಲು 600 ಹೊಸ ಬಸ್‌

ರಾಜ್ಯದ ಎಲ್ಲಾ ನಗರಗಳ ನಡುವೆ ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಹಂತ – ಹಂತವಾಗಿ 350 ವಿದ್ಯುತ್ ವಾಹನಗಳನ್ನು ನಿಗಮದಿಂದ ಸೇರ್ಪಡೆಗೊಳಿಸುವ ಯೋಜನೆಯಿದೆ/ ಗ್ರಾಮಾಂತರ ಪ್ರದೇಶದ ಪ್ರಯಾಣಿಕರಿಗೂ ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಸದುದ್ದೇಶದಿಂದ 600 ಹೊಸ ಕರ್ನಾಟಕ ಸಾರಿಗೆ ಮಾದರಿಯ ಬಸ್‌ಗಳು ಮೂರು ತಿಂಗಳ ಅವಧಿಯಲ್ಲಿ ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕೆಎಸ್‌ಆರ್‌ಟಿಸಿ ಪ್ರತಿ ದಿನ 7400 ಅನುಸೂಚಿಗಳಿಂದ 27 ಲಕ್ಷ ಕಿ.ಮೀ ಕ್ರಮಿಸುವುದರ ಮೂಲಕ 26 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದೆ. ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ನಿಗಮವು ಪ್ರತಿ ದಿನ ರೂ.9.5 ಕೋಟಿ ಆದಾಯ ಗಳಿಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಯೂರೋಪಿಯನ್ ವಿನ್ಯಾಸದ ವೋಲ್ವೋ-9600s “ಅಂಬಾರಿ ಉತ್ಸವ” ವಾಹನವನ್ನು ಸಾರ್ವಜನಿಕ ಬಳಕೆಗಾಗಿ ಲೋಕಾರ್ಪಣೆ ಮಾಡಲಾಗಿತ್ತು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಯಾವ ಊರುಗಳಿಗೆ ಎಲೆಕ್ಟ್ರಿಕ್‌ ಬಸ್‌ ಸೌಲಭ್ಯ ಲಭ್ಯ

ಬೆಂಗಳೂರು - ಮೈಸೂರು
ಬೆಂಗಳೂರು - ಮಡಿಕೇರಿ
ಬೆಂಗಳೂರು - ವಿರಾಜಪೇಟೆ
ಬೆಂಗಳೂರು- ದಾವಣಗೆರೆ
ಬೆಂಗಳೂರು- ಶಿವಮೊಗ್ಗ
ಬೆಂಗಳೂರು - ಚಿಕ್ಕಮಗಳೂರು


ಬಸ್‌ ವಿಶೇಷತೆ ಏನು?

  • ಈ ಬಸ್‌ 12 ಮೀಟರ್ ಉದ್ದವಿದ್ದು ಪ್ರತಿ ಚಾರ್ಚ್‌ಗೆ 300 ಕಿ.ಮೀ ಕ್ರಮಿಸಲಿದೆ. ಸುಧಾರಿತ ಬ್ಯಾಟರಿ ಹೊಂದಿದ್ದು 2-3 ಗಂಟೆಗಳಲ್ಲಿ ಫಾಸ್ಟ ಚಾರ್ಚಿಂಗ್ ಮೂಲಕ ಸಂಪೂರ್ಣವಾಗಿ ರೀಚಾರ್ಚ್ ಮಾಡಬಹುದಾಗಿರುತ್ತದೆ.
  • ಚಾಲಕರು, ನಿರ್ವಾಹಕರು ಸೇರಿದಂತೆ 45 ಆಸನಗಳನ್ನು ಹೊಂದಿರುತ್ತದೆ. ಬಸ್‌ನಲ್ಲಿ ಸಿಸಿ ಟಿವಿ ಕ್ಯಾಮರಾಗಳು, ಎಮರ್ಜೆನ್ಸಿ ಬಟನ್, ಅಗ್ನಿಶಾಮಕ ಸಾಧನ, ಪ್ರಥಮ ಚಿಕಿತ್ಸಾ ಕಿಟ್, ಗ್ಲಾಸ್ ಹ್ಯಾಮ್ಮರ್ ಮುಂತಾದ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ