ಆ್ಯಪ್ನಗರ

ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಜತೆ ಸಿಎಂ ಬಿಎಸ್‌ವೈ ಭೇಟಿ ಮಾಡಿದ ಎಚ್.ವಿಶ್ವನಾಥ್‌

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ. ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ನಿಶ್ಚಿತವಾಗಿದ್ದರೂ ಸೋತ ವಿಶ್ವನಾಥ್ ಸಹ ಬಿಎಸ್‌ವೈ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

Vijaya Karnataka Web 11 Dec 2019, 10:09 am
ಬೆಂಗಳೂರು: ಉಪಚುನಾವಣೆ ಗೆಲುವಿನ ಬಳಿಕ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ. ತಕ್ಷಣವೇ ಸಂಪುಟ ವಿಸ್ತರಿಸುವಂತೆ 12 ಹೊಸ ಶಾಸಕರು ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹಾಕಿದ್ದಾರೆ. ಅಲ್ಲದೆ, ಪರಾಜಿತ ಅಭ್ಯರ್ಥಿ ಹೆಚ್.ವಿಶ್ವನಾಥ್ ಸಹ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
Vijaya Karnataka Web ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಜತೆ ಸಿಎಂ ಭೇಟಿ ಮಾಡಿದ ಎಚ್.ವಿಶ್ವನಾಥ್‌


ಗೆಲುವಿನ ಬಳಿಕ ಮತ್ತೊಂದು ಮೆಟ್ಟಿಲು ಏರಲು ತವಕಿಸುತ್ತಿರುವ 12 ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪಗೆ ಒತ್ತಡ ಹಾಕಿರುವ ಶಾಸಕರು ಪ್ರಮುಖ ಖಾತೆಗಳ ಮೇಲೂ ಕಣ್ಣಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರು ಸಿಎಂ ಯಡಿಯೂರಪ್ಪ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಅಲ್ಲದೆ, ಸಮ್ಮಿಶ್ರ ಸರಕಾರಕ್ಕೆ ರಾಜೀನಾಮೆ ನೀಡಿದ್ದ ಹುಣಸೂರು ಮಾಜಿ ಶಾಸಕ ಎಚ್‌. ವಿಶ್ವನಾಥ್‌ ಸಹ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಮ್ಮಿಶ್ರ ಸರಕಾರಕ್ಕೆ ರಾಜೀನಾಮೆ ನೀಡಿದ್ದವರ ಪೈಕಿ ಗೆದ್ದವರ ಜತೆ ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್‌ ಹಾಗೂ ಎಚ್‌. ವಿಶ್ವನಾಥ್‌ ಪರ ಗೆದ್ದ ಶಾಸಕರು ನಿಂತಿದ್ದಾರೆ. ಈ ಹಿನ್ನೆಲೆ ವಿಶ್ವನಾಥ್‌ ಹಾಗೂ ಎಂಟಿಬಿ ನಾಗರಾಜ್‌ ಅವರಿಗೆ ಪರ್ಯಾಯ ಪಟ್ಟ ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿ: ಅನರ್ಹರು ಅರ್ಹರೆನಿಸಿಕೊಂಡಿದ್ದು ಹೇಗೆ? ಇಲ್ಲಿವೆ ಪ್ರಮುಖ ಕಾರಣಗಳು
ಇನ್ನೊಂದೆಡೆ, ಬಿಜೆಪಿ ಸರಕಾರ ರಚನೆಗೆ ಕಾರಣರಾದ ಅನರ್ಹರನ್ನು ದೃಷ್ಟಿಯಲ್ಲಿ ಇರಿಸಿಕೊಂಡೇ ಸಂಪುಟದಲ್ಲಿ 16 ಸ್ಥಾನಗಳನ್ನು ಸಿಎಂ ಬಿಎಸ್‌ವೈ ಖಾಲಿ ಇಟ್ಟಿದ್ದಾರೆ. ಬೈ ಎಲೆಕ್ಷನ್‌ಗೆ ತೆರೆ ಬಿದ್ದಿದ್ದರಿಂದ ಈ ಹುದ್ದೆಗಳ ಭರ್ತಿ ಶೀಘ್ರದಲ್ಲಿ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ 12 ಶಾಸಕರಿಗೂ ಸಚಿವ ಸ್ಥಾನ ನಿಶ್ಚಿತ ಎಂದು ಹೇಳಲಾಗುತ್ತಿದ್ದು, ಇದೇ ವಾರಾಂತ್ಯ ಅಥವಾ ಮಿಉಂದಿನ ವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಜತೆ ಸಿಎಂ ಭೇಟಿ ಮಾಡಿದ ಎಚ್.ವಿಶ್ವನಾಥ್‌

ಒಂದೇ ಕಲ್ಲಿನಲ್ಲಿ ಹಲವಾರು ಹಕ್ಕಿಗಳನ್ನು ಹೊಡೆದುರುಳಿಸಿದ ಯಡಿಯೂರಪ್ಪ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ