ಆ್ಯಪ್ನಗರ

ಜೆಡಿಎಸ್‌ ಯುವ ಘಟಕಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ?

ಯುವ ಘಟಕ ಅಧ್ಯಕ್ಷ ಸ್ಥಾನದ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಕಣ್ಣಿಟ್ಟಿದ್ದಾರೆ. ಆದರೆ ಕುಟುಂಬ ಸದಸ್ಯರಿಗೆ ಅಧಿಕಾರ ನೀಡಬಾರದು ಎಂಬ ಕಾರಣಕ್ಕೆ ಬೇರೆಯವರನ್ನು ಈ ಸ್ಥಾನಕ್ಕೆ ನಿಯೋಜನೆ ಮಾಡಲು ಚಿಂತನೆ ನಡೆಸಲಾಗಿದೆ.

Vijaya Karnataka 18 Dec 2019, 10:48 pm

ಬೆಂಗಳೂರು: ಜೆಡಿಎಸ್‌ನಲ್ಲಿ ಕುಟುಂಬ ಸದಸ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಕ್ಕೆ ನಿಖಿಲ್‌ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಸೂಚನೆ ಆಧರಿಸಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
Vijaya Karnataka Web Nikhil kumaraswamy


ಯುವ ಘಟಕ ಅಧ್ಯಕ್ಷ ಸ್ಥಾನದ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಕಣ್ಣಿಟ್ಟಿದ್ದಾರೆ. ಆದರೆ ಕುಟುಂಬ ಸದಸ್ಯರಿಗೆ ಅಧಿಕಾರ ನೀಡಬಾರದು ಎಂಬ ಕಾರಣಕ್ಕೆ ಬೇರೆಯವರನ್ನು ಈ ಸ್ಥಾನಕ್ಕೆ ನಿಯೋಜನೆ ಮಾಡಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿದ್ದ ಹಾಲಿ ಅಧ್ಯಕ್ಷ ಎಚ್‌ಕೆ ಕುಮಾರಸ್ವಾಮಿಯವರಿಗೆ ಅಧಿಕಾರದಲ್ಲಿ ಮುಂದುವರಿಯಲು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಜೆಡಿಎಸ್‌ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪಗೆ ಕಾಂಗ್ರೆಸ್‌ ಗಾಳ?

ಒಂದೆಡೆ ಜೆಡಿಎಸ್‌ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ ಸೆಳೆಯಲು ಕಾಂಗ್ರೆಸ್‌ ನಾಯಕರು ಕಾರ್ಯತಂತ್ರ ಹೆಣೆದಿದ್ದಾರೆ. ಇನ್ನೊಂದೆಡೆ ಪಕ್ಷದೊಳಗೆ ಎಂದಿಗಿಂತ ಹೆಚ್ಚಾಗಿ ಅಸಮಧಾನ ಹೊಗೆಯಾಡುತ್ತಿದೆ. ಇದು ದಳಪತಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನು ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ