ಆ್ಯಪ್ನಗರ

ಸುಬ್ರಹ್ಮಣ್ಯ ಚಿನ್ನದ ರಥಕ್ಕೆ ಸರಕಾರದ ಅನುದಾನ ಇಲ್ಲ

ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ, ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.

Vijaya Karnataka Web 29 Apr 2019, 5:30 pm
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಕುರಿತಂತೆ ಮಾಧ್ಯಮಗಳಲ್ಲಿ ವಿಭಿನ್ನ ವರದಿಗಳು ಪ್ರಕಟ/ ಪ್ರಸಾರವಾಗುತ್ತಿದೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಈ ಕುರಿತು ಕೆಲವು ಸ್ಪಷ್ಟನೆಗಳನ್ನು ನೀಡಲಾಗಿದೆ.

ಈ ಯೋಜನೆಗೆ 2005 ರಲ್ಲಿಯೇ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಅಂದಿನ ದಿನಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು ಇದಕ್ಕಾಗಿ ದೇವಾಲಯದಲ್ಲಿ ಲಭ್ಯವಿರುವ ಚಿನ್ನ ಬಳಸಿಕೊಂಡು ಉಳಿದ ಚಿನ್ನವನ್ನು ಬ್ಯಾಂಕಿನ ಮೂಲಕ ಖರೀದಿಸಲು ಸರ್ಕಾರ ಅನುಮೋದನೆ ನೀಡಿತ್ತು.

ಆದೇಶಗಳಲ್ಲಿ ರಥ ನಿರ್ಮಾಣಕ್ಕೆ ಸರಕಾರದ ಅನುದಾನ ಬಳಸದೆ, ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ರಥ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.

ಇತ್ತೀಚೆಗೆ ಶ್ರೀ ಕ್ಷೇತ್ರದ ಭಕ್ತರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ, ನನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದಾರೆ.

ಈ ನಿಟ್ಟಿನಲ್ಲಿ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ, ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ